Select Your Language

Notifications

webdunia
webdunia
webdunia
webdunia

ಮನರೇಗಾಕ್ಕಿಂತ ದೊಡ್ಡ ಉಪಯುಕ್ತ ಯೋಜನೆ ಬೇರೊಂದಿಲ್ಲ: ಡಿಕೆ ಶಿವಕುಮಾರ್‌

DCM DK Shivkumar

Sampriya

ಬೆಂಗಳೂರು , ಮಂಗಳವಾರ, 13 ಜನವರಿ 2026 (20:37 IST)
Photo Credit X
ಬೆಂಗಳೂರು: ಗ್ರಾಮೀಣ ಭಾಗದ ಅಭಿವೃದ್ಧಿಗೆ ನೆರವಾಗಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಬಿಜೆಪಿ ಸರ್ಕಾರ ಕೊಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.

ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ “ಮನರೇಗಾ ಬಚಾವ್ ಸಂಗ್ರಾಮ” ಹೋರಾಟದ ಪೂರ್ವಸಿದ್ಧತಾ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಮಾತನಾಡಿದರು. 

ಶ್ರೀಮತಿ ಸೋನಿಯಾ ಗಾಂಧಿ ಅವರು ಮನಮೋಹನ್ ಸಿಂಗ್ ಅವರ ಸರ್ಕಾರದಲ್ಲಿ ಸಂವಿಧಾನದ ಮೂಲಕ ಬಡವರಿಗೆ ಉದ್ಯೋಗ ಖಾತರಿ ಹಕ್ಕನ್ನು ನೀಡಿದ್ದರು. ಇದರಿಂದ ನಮ್ಮ ರಾಜ್ಯದ ಪಂಚಾಯಿತಿ ಹಾಗೂ ಗ್ರಾಮಗಳ ಮಟ್ಟದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ ಮೊತ್ತದ ಕಾಮಗಾರಿಗಳು ನಡೆಯುತ್ತಿದ್ದವು. ಈ ಕೆಲಸಗಳನ್ನು ಸ್ಥಳೀಯ ಪಂಚಾಯಿತಿ ಸದಸ್ಯರು ತೀರ್ಮಾನ ಮಾಡುತ್ತಿದ್ದರು. ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಉದ್ಯೋಗ ನೀಡಬೇಕಿತ್ತು, ಉದ್ಯೋಗ ಸಿಗದಿದ್ದರೆ ಕೂಲಿ ನೀಡಲಾಗುತ್ತಿತ್ತು. ಇದರಲ್ಲಿ ದುರ್ಬಳಕೆ ತಡೆಗಟ್ಟಲು ಹೆಬ್ಬೆರಳಚ್ಚು ಸಂಗ್ರಹ ವಿಧಾನ ಅಳವಡಿಸಿಕೊಳ್ಳಲಾಗಿತ್ತು ಎಂದು ತಿಳಿಸಿದರು.

“ಈ ಯೋಜನೆಯಲ್ಲಿ ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಯಾಗಿತ್ತು. ನಾವು ಬಳ್ಳಾರಿ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಕೆಲವು ಮಹಿಳೆಯರನ್ನು ವಿಚಾರಿಸಿದೆವು. ಕೆಲವು ಮಹಿಳೆಯರು ಬೇರೆಯವರ ಜಮೀನಿನಲ್ಲಿ ಹೋಗಿ ಕೆಲಸ ಮಾಡಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದರು. ಆಗ ಕೆಪಿಸಿಸಿ ಕಾರ್ಯಾಧ್ಯಕ್ಷನಾಗಿದ್ದ ನಾನು ದೆಹಲಿಗೆ ಹೋಗಿ, ಈ ಪರಿಸ್ಥಿತಿಯನ್ನು ಸೋನಿಯಾ ಗಾಂಧಿ ಅವರಿಗೆ ತಿಳಿಸಿದೆ. ಅವರು ಸಿ.ಪಿ ಜೋಷಿ ಅವರನ್ನು ಕರೆಸಿ ಈ ವಿಚಾರದ ಬಗ್ಗೆ ಗಮನಹರಿಸಿ ಎಂದು ಸೂಚಿಸಿದರು. ನಂತರ ರೈತರು ತಮ್ಮ ಸ್ವಂತ ಜಮೀನುಗಳಲ್ಲಿ ತಾವೇ ಕೂಲಿ ಮಾಡಿದರೆ, ಜಮೀನು ಮಟ್ಟ, ದನ, ಕುರಿ ಕೊಟ್ಟಿಗೆ, ಇಂಗು ಗುಂಡಿ, ಕೃಷಿ ಹೊಂಡ ನಿರ್ಮಾಣಕ್ಕೆ ಕೂಲಿ ನೀಡುವ ವ್ಯವಸ್ಥೆ ತಂದರು. ಇನ್ನು ರೈತರು ತಮ್ಮ ಜಮೀನಿನಲ್ಲಿ ತೋಟಗಾರಿಕಾ ಬೆಳೆ ಬೆಳೆಯಲು ಅವಕಾಶ ಕಲ್ಪಿಸಿಕೊಟ್ಟರು” ಎಂದು ವಿವರಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಇರಾನ್ ಪ್ರತಿಭಟನೆ: ಅಧಿಕಾರಿಯೊಬ್ಬರು ಬಿಚ್ಚಿಟ್ಟ ವಿಚಾರ ತಿಳಿದ್ರೆ ಶಾಕ್