Select Your Language

Notifications

webdunia
webdunia
webdunia
webdunia

ಈದ್ಗಾ ಮೈದಾನದಲ್ಲಿ ಹಬ್ಬ ಆಚರಿಸಲ್ಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ..!!!

ಈದ್ಗಾ ಮೈದಾನದಲ್ಲಿ ಹಬ್ಬ ಆಚರಿಸಲ್ಲು ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ..!!!
ಬೆಂಗಳೂರು , ಗುರುವಾರ, 14 ಜುಲೈ 2022 (16:58 IST)
ಬಿಬಿಎಂಪಿ ಆಟದ ಮೈದಾನದಲ್ಲಿ ಹಬ್ಬಗಳನ್ನು ಆಚರಣೆ ಮಾಡಲೂ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ ಎಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ.ಮೋಹನ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆ ಈದ್ಗಾ ಮೈದಾನ ಆಟದ ಮೈದಾನದವಾಗಿಯೇ ಇರುತ್ತದೆ.
ಬಿಬಿಎಂಪಿ ಆಟದ ಮೈದಾನ. ಇಲ್ಲಿ ಹಬ್ಬಗಳ ಆಚರಣೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆ ಬೇಕಿಲ್ಲ ಎಂದು ಹೇಳಿದರು. ಸ್ವಾತಂತ್ರ್ಯ ಬಂದು‌ 75 ವರ್ಷಗಳು ಕಳೆದಿರುವ ಹಿನ್ನೆಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುತ್ತಿದ್ದೇವೆ. ಅದೇ ಮೈದಾನದಲ್ಲಿ ರಾಷ್ಟ್ರಧ್ವಜ ಹಾರಿಸಲಿದ್ದೇವೆ.
 
ಒಂದು ವೇಳೆ ರಾಷ್ಟ್ರ ಧ್ವಜ ಹಾರಿಸಲು ಅವಕಾಶ ಕೊಡದಿದ್ದರೆ ಅದು ದೇಶಕ್ಕೆ ಮಾಡಿದ ಅವಮಾನವಾಗುತ್ತದೆ. ಆಗಸ್ಟ್ 15ರಂದು ರಾಷ್ಟ್ರಧ್ವಜ ಹಾರಿಸಲು ಅನುಮತಿ‌ ಕೊಡಲೇಬೇಕು ಎಂದು ತಿಳಿಸಿದರು.
 
ಇನ್ನೂ ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ಗಣೇಶ ಉತ್ಸವ ಮಾಡಲು ಅವಕಾಶ ಕೋರಿ ಮನವಿ ಸಲ್ಲಿಸಲಾಗಿದೆ. ಇದು ಬಿಬಿಎಂಪಿ ಆಟದ ಮೈದಾನವಾಗಿರುವುದರಿಂದ ಅದಕ್ಕೆ 'ಜಯಚಾಮರಾಜೇಂದ್ರ ಆಟದ ಮೈದಾನ' ಎಂಬ ಹೆಸರಿಡಲು ನಾನು ಆಗ್ರಹಿಸಿದ್ದೇನೆ. ಇಲ್ಲಿ ಯಾರೂ ದೇಶ ವಿರೋಧಿ ಚಟುವಟಿಕೆ ಮಾಡುತ್ತಿಲ್ಲ. ಹೀಗಾಗಿ ನಮಗೂ ಹಬ್ಬದ ಆಚರಣೆಗೆ ಅವಕಾಶ ಕೊಡಬೇಕು ಎಂದು ಒತ್ತಾಯ ಮಾಡಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಕೆನಡಾದಲ್ಲಿನ ಸಂಸದ ಕನ್ನಡಿಗ ಚಂದ್ರ ಆರ್ಯ ಬೆಂಗಳೂರಿಗೆ ಭೇಟಿ