ಬೆಂಗಳೂರು : ಕೋವಿಡ್-19 ಲಸಿಕೆ ಅಭಿಯಾನದಲ್ಲಿ ದೇಶದಲ್ಲೇ ಕರ್ನಾಟಕ ಒಳ್ಳೆಯ ಹೆಸರು ಮಾಡಿದೆ.
ಲಸಿಕಾ ಅಭಿಯಾನದಲ್ಲಿ ರಾಜ್ಯ ಉತ್ತಮ ಪ್ರಗತಿ ಸಾಧಿಸಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಆದರೂ ಹಲವೆಡೆ ಜನರು ಕೋವಿಡ್ ಲಸಿಕೆ ಪಡೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ.
ಲಸಿಕೆ ಪಡೆದುಕೊಳ್ಳಿ ಎನ್ನುತ್ತಾ ಮನೆ ಮುಂದೆ ಹೋಗುವ ಅಧಿಕಾರಿಗಳಿಗೆ ಜನರಿಂದ ಕಹಿ ಅನುಭವಗಳಾಗಿವೆ. ನೆಲಮಂಗಲ ತಾಲ್ಲೂಕಿನ ಗೋವಿಂದಪುರದಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂದು ಜಾಗೃತಿ ಮೂಡಿಸಿದ ಆರೋಗ್ಯ ಸಿಬ್ಬಂದಿ ಜೊತೆಗೆ ಮಹಿಳೆ ಕಿರಿಕ್ ಮಾಡಿಕೊಂಡಿರುವ ಘಟನೆ ನಡೆದಿದೆ.
ಲಸಿಕೆ ಹಾಕಿಸಿಕೊಳ್ಳಿ ಎಂದ ಆರೋಗ್ಯ ಸಿಬ್ಬಂದಿಗೆ, ಒಂದು ತೊಟ್ಟು ವಿಷ ಕೊಟ್ಬಿಡಿ ಆದ್ರೆ ವ್ಯಾಕ್ಸಿನ್ ಮಾತ್ರ ಬೇಡ ಎಂದು ಮಹಿಳೆ ನಿರಾಕರಿಸಿರುವ ಪ್ರಸಂಗ ನಡೆದಿದೆ.