Select Your Language

Notifications

webdunia
webdunia
webdunia
webdunia

ಸಮೀಕ್ಷೆಯ ಅಗತ್ಯವಿಲ್ಲ, ಕಾಂಗ್ರೆಸ್‌ಗೆ ಸೋಲು ಖಚಿತ: ಪ್ರಧಾನಿ ಮೋದಿ

Prime Minister Narendra Modi

Sampriya

, ಶುಕ್ರವಾರ, 3 ಮೇ 2024 (20:46 IST)
ಬರ್ಧಮಾನ್:  ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ಮಾಡಲಿದೆ ಎಂದು ಭವಿಷ್ಯ ನುಡಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಧಾನಿ ಮೋದಿ ಲೇವಡಿ ಮಾಡಿದರು.

ಲೋಕಸಭೆ ಚುನಾವಣೆ ಹಿನ್ನೆಲೆ  ಪಶ್ಚಿಮ ಬಂಗಾಳದ ಬರ್ಧಮಾನ್ ದುರ್ಗಾಪುರದಲ್ಲಿ ಚುನಾವಣಾ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು,  ಕೇರಳದ ವಯನಾಡ್ ಕ್ಷೇತ್ರದಲ್ಲಿ ಸೋಲನ್ನು ಮನಗಂಡಿರುವ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್‌ಬರೇಲಿಯಿಂದ ಕಣಕ್ಕಿಳಿದಿದ್ದಾರೆ ಎಂದರು.

ಈ ವೇಳೆ ಕಾಂಗ್ರೆಸ್ ವಿರುದ್ಧ ಗುಡುಗಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮತಗಟ್ಟೆ ಸಮೀಕ್ಷೆಯ ಅಗತ್ಯವಿಲ್ಲ. ಕಾಂಗ್ರೆಸ್ ಸೋಲಿನ ಬಗ್ಗೆ ಹಿಂದೆಯೇ ಹೇಳಿದ್ದೆ ಎಂದರು.

 ಕಾಂಗ್ರೆಸ್‌ನ ಹಿರಿಯ ನಾಯಕಿ ಲೋಕಸಭಾ ಸ್ಥಾನವನ್ನು ತೊರೆದು ರಾಜಸ್ಥಾನದ ರಾಜ್ಯಸಭೆಯ ಮೂಲಕ ಸಂಸತ್ತನ್ನು ಪ್ರವೇಶಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸೋಲಿನ ಸೂಚನೆಯನ್ನು ಹೊಂದಿದೆ ಎಂಬುದಕ್ಕೆ ಇದುವೇ ಸಾಕ್ಷಿ' ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ರೈಲಿನಲ್ಲಿ ಶೌಚಾಲಯ ಬಳಸುವ ವೇಳೆ ಆಯತಪ್ಪಿ ಬಿದ್ದು ಗರ್ಭಿಣಿ ಸಾವು