Select Your Language

Notifications

webdunia
webdunia
webdunia
webdunia

ಅಮೂಲ್ ಜೊತೆ ನಂದಿನಿ ವಿಲೀನ ಪ್ರಸ್ತಾಪವೇ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಅಮೂಲ್ ಜೊತೆ ನಂದಿನಿ ವಿಲೀನ ಪ್ರಸ್ತಾಪವೇ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್
bangalore , ಭಾನುವಾರ, 9 ಏಪ್ರಿಲ್ 2023 (18:50 IST)
ಅಮೂಲ್ ಜೊತೆ ನಂದಿನಿ ಉತ್ಪನ್ನಗಳನ್ನು ತಯಾರಿಸುವ ಕೆಎಂಎಫ್ ವಿಲೀನ ಪ್ರಸ್ತಾಪವೇ ಇಲ್ಲ ಎಂದು ರಾಜ್ಯದ ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್  ಖಡಕ್ ಆಗಿ ಉತ್ತರಿಸಿದ್ರು.ಮಲ್ಲೇಶ್ವರಂನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಕರ್ನಾಟಕದಲ್ಲಿ 15 ಮಿಲ್ಕ್ ಯೂನಿಯನ್‍ಗಳಿವೆ. ಎಲ್ಲವೂ ಲಾಭದಲ್ಲಿವೆ. ಕೋವಿಡ್ ವೇಳೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಮಿಗತೆ ಹಾಲಿನ ಪುಡಿಯನ್ನು ಶಾಲಾ ಮಕ್ಕಳಿಗೆ ಉಚಿತವಾಗಿ ಕೊಡಲು ಏರ್ಪಾಡು ಮಾಡಲಾಗಿತ್ತು. ಅದಕ್ಕೆ ಬೇಕಾದ ಹಣವನ್ನು ಕೆಎಂಎಫ್‍ಗೆ ಕೊಡಲಾಗಿತ್ತು. ಮಿಗತೆ ಹಾಲು ಉಚಿತವಾಗಿ ಕೊಡಲು ಆದೇಶ ಮಾಡಿದ್ದೀವಿ... ಕೆಎಂಎಫ್‍ನ ನಂದಿನಿ ವಿಶ್ವಾದ್ಯಂತ ವಹಿವಾಟು ಹೊಂದಿದೆ. ಕಳೆದ ವರ್ಷ ಡಿಸೆಂಬರ್ 30ರಂದು  ಮಂಡ್ಯ ಜಿಲ್ಲೆ ಮದ್ದೂರಿನ ಗೆಜ್ಜಲಗೆರೆಯಲ್ಲಿ ಕೇಂದ್ರದ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ನಂದಿನಿ ಮಾರುಕಟ್ಟೆ ವಿಸ್ತರಣೆ, ತಂತ್ರಜ್ಞಾನ ನೆರವು ಪಡೆಯಲು ಅಮೂಲ್ ಜೊತೆ ಚರ್ಚಿಸಲು ತಿಳಿಸಿದ್ದಾರೆ ಹೊರೆತು ವಿಲೀನ ಮಾಡಲು ಅಲ್ಲ ಎಂದು ಸ್ಪಷ್ಟನೆ ನೀಡಿದ್ರು....ಇನ್ನೂ ನಂದಿನಿ ವಿಶೇಷದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜಕಾರಣ ಮಾಡ್ತಾ ಇದೆ ಜನರಿಗೆ ತಪ್ಪು ಸಂದೇಶ ನೀಡ್ತಾ ಇದಾರೆ ಎಂದು ಎರೆಡು ಪಕ್ಷಗಳ ವಿರುದ್ಧ ಕಿಡಿಕಾರಿದ್ರು

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದು ಟ್ವೀಟ್ ಗೆ ರವಿಕುಮಾರ್ ತಿರುಗೇಟು