ಬೆಂಗಳೂರು: ಅಕ್ರಮ ಗಣಿಗಾರಿಕೆ ತಡೆಯುತ್ತಿದ್ದ ಮಹಿಳಾ ಅಧಿಕಾರಿಗೆ ಶಾಸಕರೊಬ್ಬರ ಪುತ್ರ ಅವಾಚ್ಯ ಪದಗಳನ್ನು ಬಳಸಿ ಅವಾಜ್ ಹಾಕಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದುಕೊಂಡಿದೆ.
ಮಹಿಳೆಯರಿಗೆ ರಕ್ಷಣೆಯಿಲ್ಲ - ಮಹಿಳಾ ಅಧಿಕಾರಿಗಳಿಗೆ ಗೌರವವಿಲ್ಲ ಇದು ಕಾಂಗ್ರೆಸ್ ಸರ್ಕಾರದ ಮಹಿಳಾ ನೀತಿ.
ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಸ್ಥಳಕ್ಕೆ ಹೋದಾಗ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ ಬಳಸಿದ ಭಾಷೆ ಅತ್ಯಂತ ಖಂಡನೀಯ.
ಸಿಎಂ ಸಿದ್ದರಾಮಯ್ಯನವರೆ, ಡಿಸಿಎಂ ಡಿಕೆ ಶಿವಕುಮಾರ್ ಅವರೆ, ಮಹಿಳಾ ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದಿಸುವುದು ನಿಮ್ಮ ಕಾಂಗ್ರೆಸ್ ಸಂಸ್ಕೃತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಭದ್ರಾವತಿಯನ್ನು ರಿಪಬ್ಲಿಕ್ ಮಾಡಿ ಆಟಾಟೋಪ ಮೆರೆಯುತ್ತಿರುವ ಶಾಸಕರ ಪುತ್ರ ಬಸವೇಶ್‌ರನ್ನು ಬಂಧಿಸಿ, ಗಡಿಪಾರು ಮಾಡಿ.