ನಗರದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ, ರ‍್ಯಾಲಿ ನಡೆಸಲು ಬ್ರೇಕ್ ಬೀಳುವ ಸಾಧ್ಯತೆಗಳಿವೆ.
ಪ್ರತಿನಿತ್ಯ ಒಂದಿಲ್ಲ ಒಂದು ಪ್ರತಿಭಟನೆ ನಡೆಯುವ ಫ್ರೀಡಂ ಪಾರ್ಕ್ ಸುತ್ತಮತ್ತು ಹಲವಾರು ಕಾಲೇಜುಗಳಿದ್ದು, ಪ್ರತಿಭಟನಾ ಕಾರರ ಕೂಗಾಟ ಕಿರುಚಾಟದಿಂದ ವಿದ್ಯಾರ್ಥಿಗಳು ಪಾಠ ಕೇಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಂತೆ.
ಪಾರ್ಕ್ ಸುತ್ತಮುತ್ತ ಇರುವ ಕಾಲೇಜುಗಳ ಆಡಳಿತ ಮಂಡಳಿಯವರು ಕೋರ್ಟ್ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ.
ಈ ನಾಲ್ಕು ಕಾಲೇಜಿನಲ್ಲಿ ಸರಿಸುಮಾರು 4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಮಾತ್ರವಲ್ಲ ಆಗಾಗ ಪರೀಕ್ಷೆಗಳು ನಡೆಯುತ್ತಿರುತ್ತವೆ. ಸಮೀಪದ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸುವ ಪ್ರತಿಭಟನಾಕಾರರ ದಿಕ್ಕಾರ ಘೋಷಣೆಗಳಿಂದ ಗಮನವಿಟ್ಟು ಪಾಠ ಆಲಿಸಲು ಸಾಧ್ಯವಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.