ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ, ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದ್ದರು.
ಸಚಿವಾಲಯದ ಕಟ್ಟಡಗಳಿಗೆ, ಮುಖ್ಯಮಂತ್ರಿಗಳ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಗೆ ಮಾತ್ರವೇ ಆಗಮಿಸುವ ಇಲಾಖಾ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರುಗಳು 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿದ್ದರೇ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತನ್ನ ಸು
ತ್ತೋಲೆಯಲ್ಲಿ ಮಾಹಿತಿ ನೀಡಿದ್ದಾರೆ.