ವಿಧಾನಸೌಧಕೆ ಜನರ ನಿರ್ಬಂಧ

Webdunia
ಬುಧವಾರ, 5 ಜನವರಿ 2022 (16:46 IST)
ರಾಜ್ಯದಲ್ಲಿ ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆ, ವಿಧಾನಸೌಧ ಹಾಗೂ ವಿಕಾಸಸೌಧ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಿದ್ದರು.
ಸಚಿವಾಲಯದ ಕಟ್ಟಡಗಳಿಗೆ, ಮುಖ್ಯಮಂತ್ರಿಗಳ ಸಚಿವಾಲಯ, ಸಚಿವರು ಹಾಗೂ ಸಚಿವಾಲಯದ ಇಲಾಖೆಗಳಿಂದ ಮುಂಚಿತವಾಗಿ ನಿಗದಿಪಡಿಸಲಾದ ಭೇಟಿಗೆ ಮಾತ್ರವೇ ಆಗಮಿಸುವ ಇಲಾಖಾ ಮುಖ್ಯಸ್ಥರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರುಗಳು 2 ಡೋಸ್ ಕೋವಿಡ್ ಲಸಿಕೆಯನ್ನು ಪಡೆದಿರುವ ಪ್ರಮಾಣ ಪತ್ರವನ್ನು ಹೊಂದಿದ್ದರೇ ಮಾತ್ರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎಂದು ತನ್ನ ಸು
ತ್ತೋಲೆಯಲ್ಲಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments