Select Your Language

Notifications

webdunia
webdunia
webdunia
webdunia

ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ: ಜಿ.ಪರಮೇಶ್ವರ್

ಯಾವ ಪಕ್ಷದೊಂದಿಗೂ ಮೈತ್ರಿಯಿಲ್ಲ: ಜಿ.ಪರಮೇಶ್ವರ್
ಬೆಂಗಳೂರು , ಸೋಮವಾರ, 15 ಮೇ 2017 (16:51 IST)
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಹೇಳಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಜನಪರ, ರೈತಪರವಾಗಿದ್ದರಿಂದ ಸ್ವಂತ ಬಲದ ಮೇಲೆಯೇ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದ್ದಾರೆ.
 
ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಕುರಿತಂತೆ ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿದ್ದೇನೆ ಎಂದರು.
 
ಮುಂದಿನ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸುತ್ತೇವೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ವೈರಸ್ ಅಲರ್ಟ್: ದೇಶಾದ್ಯಂತ ಹಲವಾರು ಎಟಿಎಂಗಳು ಬಂದ್