Select Your Language

Notifications

webdunia
webdunia
webdunia
webdunia

ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ಈಶ್ವರಪ್ಪ
ಬಳ್ಳಾರಿ , ಶುಕ್ರವಾರ, 9 ಡಿಸೆಂಬರ್ 2016 (15:35 IST)
ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
 
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಠಾಧೀಶರುಗಳು ರಾಯಣ್ಣ ಬ್ರಿಗೇಡ್ ಕಟ್ಟಲು ಆಶೀರ್ವಾದ ನೀಡಲು ಮುಂದೆ ಬಂದಿದ್ದಾರೆ. ಯಾವುದೇ ಕಾರಣಕ್ಕೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬ್ರಿಗೇಡ್ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ಪಷ್ಟಪಡಿಸಿದ್ದೇನೆ ಎಂದರು. 
 
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಕುರಿತು ಆಯನೂರು ಮಂಜುನಾಥ್, ದಿನೇಶ್ ಗುಂಡೂರಾವ್ ಸೇರಿದಂತೆ ಯಾರೇ ಟೀಕೆ ಮಾಡಿದರು ಸರಿ. ಹಿಂದುಳಿದ ವರ್ಗದ ಹೋರಾಟಕ್ಕೆ ಹುಟ್ಟಿಕೊಂಡ ಸಂಘಟನೆಯಿಂದ ಹಿಂದೆ ಸರಿಯಲ್ಲ ಎಂದರು.
 
ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ. ಬರಗಾಲ ನಿರ್ವಹಣೆಯಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳತ್ತ ಮುಖ ಮಾಡುತ್ತಿಲ್ಲ. ಈ ವರೆಗೂ ಗೋಶಾಲೆ ತೆರೆದಿಲ್ಲವೆಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡರು ಪುನರ್ ಆಯ್ಕೆ