Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ: ಶಿವರಾಜ್ ತಂಗಡಗಿ

ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ: ಶಿವರಾಜ್ ತಂಗಡಗಿ
ಕೊಪ್ಪಳ , ಮಂಗಳವಾರ, 25 ಅಕ್ಟೋಬರ್ 2016 (20:40 IST)
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲಿ, ಬಿಡಲಿ. ಆದರೆ, ಯಾವ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಸ್ಪಷ್ಟಪಡಿಸಿದರು. 
 
ಗಂಗಾವತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನನ್ನೂ ಬಯಸದ ವ್ಯಕ್ತಿ ನಾನು. ನನ್ನ ಕ್ಷೇತ್ರದ ಜನ ಎರಡು ಬಾರಿ ಶಾಸಕನಾಗುವ ಅವಕಾಶ ನೀಡಿದ್ದಾರೆ. ಇದೇ ಕಾರಣಕ್ಕೆ ಎರೆಡು ಬಾರಿ ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನವೂ ಲಭಿಸಿತ್ತು. ಇದೀಗ ಉಳಿದಿರುವುದು ಮುಖ್ಯಮಂತ್ರಿ ಸ್ಥಾನ ಮಾತ್ರ. ಆದರೆ, ಅದು ಕಷ್ಟ ಸಾಧ್ಯ. ಸಿಎಂ ಹುದ್ದೆ ಬೆನ್ನಿಗೆ ಬೀಳುವ ಅಗತ್ಯವೂ ನನಗಿಲ್ಲ ಎಂದರು.
 
ನನ್ನ ರಾಜಕೀಯ ಜೀವನದಲ್ಲಿ ಅಧಿಕಾರ, ರಾಜಕೀಯ ಸೇರಿದಂತೆ ಎಲ್ಲವೂ ಲಭಿಸಿದೆ. ಮತ್ತೆ ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವ ಅಗತ್ಯ ಹಾಗೂ ಉದ್ದೇಶ ನನಗಿಲ್ಲ ಎಂದು ಸ್ಪಷ್ಟಪಡಿಸಿದರು.  
 
ಅವಕಾಶ ಸಿಕ್ಕರೆ ಮತ್ತೆ ಕಾಂಗ್ರೆಸ್ ಪಕ್ಷದಿಂದಲೇ ಸ್ಪರ್ಧಿಸುತ್ತೇನೆ. ಜನ ಮತ ನೀಡಿ ಆಶೀರ್ವಾದ ಮಾಡಿದರೇ ಶಾಸಕನಾಗುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರಲಿ, ಬಿಡಲಿ ಶಾಸಕನಾಗಿ ಕ್ಷೇತ್ರದ ಜನತೆಯ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡಿದರು. 
 
ಕಳೆದ ಕೆಲವು ದಿನಗಳಿಂದ ಮಾಜಿ ಸಚಿವ ಶಿವರಾಜ್ ತಂಗಡಗಿ ಅವರು ಕಾಂಗ್ರೆಸ್ ಪಕ್ಷ ತೊರೆಯಲಿದ್ದಾರೆ ಎನ್ನುವ ಉಹಾಪೋಹಗಳು ಹರಡಿದ್ದವು. ಏನೇ ಆದರೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಹೇಳುವ ಮೂಲಕ ಎಲ್ಲ ಉಹಾಪೋಹಗಳಿಗೆ ತಂಗಡಗಿ ತೆರೆ ಎಳೆದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿ ಆರೋಪಕ್ಕೆ ಉತ್ತರಿಸುವ ಅಗತ್ಯವಿಲ್ಲ: ಯಡಿಯೂರಪ್ಪ