Publish Date: Wed, 24 Aug 2016 (18:21 IST)
Updated Date: Thu, 25 Aug 2016 (11:01 IST)
ನಾನು ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸ್ಪಷ್ಟಪಡಿಸಿದ್ದಾರೆ.
ಇತ್ತೀಚೆಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷ ಬಿಟ್ಟು ಜೆಡಿಎಸ್ ಪಕ್ಷ ಸೇರುತ್ತಾರೆ ಎಂದು ವದಂತಿಗಳು ಹರಿದಾಡುತ್ತಿದ್ದವು.
ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿ ಸೇವೆ ಸಲ್ಲಿಸಿದ ಅನುಭವವಿದೆ. ಮಂಡ್ಯದಲ್ಲಿ ರಾಜಕಾರಣ ಮಾಡುವ ಆಶೆ ಇದೆ. ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುತ್ತೇನೆ ಎಂದು ಕೇಳಿಕೊಂಡಿದ್ದೆ ಎಂದು ಹೇಳಿದರು.
ರೆಬಲ್ ಸ್ಟಾರ್ ಅಂಬರೀಶ್ ಅವರಿಂದ ತೆರವುಗೊಂಡಿರುವ ಸಚಿವ ಸ್ಥಾನವನ್ನು ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಮನವಿ ಮಾಡಿಕೊಂಡಿದ್ದೆ. ಆದರೆ, ಅವರು ನಿರಾಕರಿಸಿದರು ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .