ಈ ತಿಂಗಳು 27ಕ್ಕೆ ನನಗೆ 80 ವರ್ಷ ತುಂಬುತ್ತಿದೆ. ಈ ವಿಶೇಷ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬರುತ್ತಿದ್ದಾರೆ. ಅಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಆಗಲಿದೆ. ನಿಮ್ಮ ಹುಟ್ಟುಹಬ್ಬದ ದಿನವೇ ಬರ್ತಿನಿ ಅಂತ ಮೋದಿ ಸಹ ಹೇಳಿದ್ದಾರೆ ಎಂದು ಬಿಎಸ್‌ವೈ ತಿಳಿಸಿದರು. 15ನೇ ವಿಧಾನಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಬಳಿ ಮಾಲಾರ್ಪಣೆ ಮಾಡಿ ನಿರ್ಗಮಿಸಿದರು. ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಸಹೊದ್ಯೋಗಿಗಳೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡ ಬಳಿಕ ಮಾತನಾಡಿದ ಅವರು, ಇಂದು ಅಂಬೇಡ್ಕರ್ ಹಾಗೂ ಗಾಂಧಿ ಪುತ್ತಳಿಗೆ ಮಾಲಾರ್ಪಣೆ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಬಿಜೆಪಿ ಮತ್ತೊಮ್ಮೆ ಬಹುಮತದಿಂದ ಆಯ್ಕೆ ಆಗಲಿ. ನಾನು ಚುನಾವಣೆಗೆ ನಿಲ್ಲಲ್ಲ. ರಾಜ್ಯದ ಉದ್ದಗಲಕ್ಕೂ ಕೆಲಸ ಮಾಡುತ್ತೇನೆ. ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ ಎಂದು ಭವಿಷ್ಯ ನುಡಿದ್ರು