ಚಾಮುಂಡಿ ಬೆಟ್ಟಕ್ಕೆ ಜಾತ್ಯತೀತ ಪಟ್ಟಿ ಬೇಡ: ಡಿಕೆಶಿಗೆ ಸಂಸದ ಯದುವೀರ್ ಒಡೆಯರ್‌ ಕೌಂಟರ್‌

Sampriya
ಬುಧವಾರ, 27 ಆಗಸ್ಟ್ 2025 (10:28 IST)
ಮೈಸೂರು: ಚಾಮುಂಡಿ ಬೆಟ್ಟ ಕೇವಲ ಹಿಂದೂ ಧರ್ಮಕ್ಕೆ ಸೇರಿದಲ್ಲ ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಮೈಸೂರು ರಾಜವಂಶಸ್ಥರೂ ಆಗಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೌಂಟರ್‌ ಕೊಟ್ಟಿದ್ದಾರೆ. 

ಡಿ.ಕೆ.‌ಶಿವಕುಮಾರ್ ನೀಡಿರುವ ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂಬ ಹೇಳಿಕೆಯು ಬೇಜವಾಬ್ದಾರಿ ಹಾಗೂ ಆಘಾತಕಾರಿಯಾಗಿದೆ. ಈ ದೇವಸ್ಥಾನದ ಮೇಲೆ ಜಾತ್ಯತೀತ ಪಟ್ಟಿಯನ್ನು ಹಾಕುವ ಅವಶ್ಯಕತೆ ಇಲ್ಲ ಎಂದು ತಿರುಗೇಟು ನೀಡಿದ್ದಾರೆ. 

ಚಾಮುಂಡಿ ಬೆಟ್ಟವು ಭಾರತೀಯ ಧರ್ಮ, ಹಿಂದೂ ಧರ್ಮಕ್ಕೆ ಸೇರಿರುವಂತಹ ಶಕ್ತಿ ಪೀಠ. ಕೋಟ್ಯಂತರ ಮಂದಿ ಚಾಮುಂಡಿ ತಾಯಿಯ ಮೇಲಿನ ನಂಬಿಕೆಯಿಂದ ಬರುತ್ತಾರೆ, ಒಳಿತಾಗಲೆಂದು ಪ್ರಾರ್ಥಿಸುತ್ತಾರೆ. ಅವರ ಹೇಳಿಕೆ ಖಂಡನೀಯವಾದುದು ಕಿಡಿಕಾರಿದರು.

ಕೋಟ್ಯಂತರ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿರುವ ಬೆಳವಣಿಗೆ ಹಾಗೂ ಹೇಳಿಕೆಗಳ ಕಾರಣದಿಂದಲೇ ನಾನು ಖಂಡನೆ, ವಿರೋಧ ಹಾಗೂ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದೇನೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರವು ಹಿಂದೂ ಧಾರ್ಮಿಕ ಕೇಂದ್ರಗಳ ವಿಷಯದಲ್ಲಿ ರಾಜಕೀಯ ಮಾಡಲಾಗುತ್ತಿದೆ. ಧರ್ಮಸ್ಥಳದ ವಿಷಯದಲ್ಲೂ‌ ಅದನ್ನು ನೋಡಬಹುದು. ಎಸ್‌ಐಟಿ ತನಿಖೆ ನಡೆಯುತ್ತಿದ್ದು ದಿನಕ್ಕೊಂದು ಸತ್ಯ ಹೊರಬರುತ್ತಿದೆ. ಅಲ್ಲಿ ಯಾವ ರೀತಿಯ ಬೆಳವಣಿಗೆಗಳು ನಡೆದಿವೆಯೋ ಅದರ ಬಗ್ಗೆಯೂ ಬಹಳ ಪ್ರಶ್ನೆಗಳಿವೆ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಪ್ರಧಾನಿ ನರೇಂದ್ರ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

ಮುಂದಿನ ಸುದ್ದಿ
Show comments