Select Your Language

Notifications

webdunia
webdunia
webdunia
webdunia

ಟ್ಯಾಕ್ಸ್ ಕಟ್ಟೋರು ಯಾರೂ ಗೃಹಲಕ್ಷ್ಮಿ ಬೇಕು ಅಂತ ಕೇಳ್ತಿಲ್ಲ: ಶಿವಕುಮಾರ್

ಟ್ಯಾಕ್ಸ್ ಕಟ್ಟೋರು ಯಾರೂ ಗೃಹಲಕ್ಷ್ಮಿ ಬೇಕು ಅಂತ ಕೇಳ್ತಿಲ್ಲ: ಶಿವಕುಮಾರ್
ಬೆಂಗಳೂರು , ಬುಧವಾರ, 7 ಜೂನ್ 2023 (14:56 IST)
ಬೆಂಗಳೂರು : ತೆರಿಗೆ ಪಾವತಿ ಮಾಡುವವರು ಯಾರೂ ನಮಗೆ ಗೃಹಲಕ್ಷ್ಮಿ ಬೇಕು ಅಂತ ಕೇಳುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಗೃಹಲಕ್ಷ್ಮಿಗೆ ಕಂಡಿಷನ್ ವಿಚಾರ ಸಂಬಂಧ ಪ್ರತಿಕ್ರಿಯಿಸಿ, ನಾವು ಸರ್ಕಾರ ನಾವು ತೀರ್ಮಾನ ಮಾಡುವುದಾಗಿ ಹೊಸ ವರಸೆ ತೆಗೆದರು.

ಒಬ್ಬರಿಗೆ ಒಂದು ರೂಪಾಯಿ ಕೊಡಬೇಕಾದ್ರೆ ಅಕೌಂಟ್ ಇರಬೇಕು. ವೋಟರ್ ಐಡಿ, ಆಧಾರ್ ಕಾರ್ಡ್ ಇರಬೇಕು. ಅವರದ್ದೇ ಬ್ಯಾಂಕ್ ಅಕೌಂಟ್ ಇರಬೇಕು. ನಮ್ಮ ಬಳಿ ಎಲ್ಲಾ ದಾಖಲೆ ಇದೆ. ಮನೆ ಯಜಮಾನಿ ಅವರೇ ತೀರ್ಮಾನ ಮಾಡಬೇಕು. ಟ್ಯಾಕ್ಸ್ ಕೊಟ್ಟೋರು ಯಾರೂ ಗೃಹಲಕ್ಷ್ಮಿ ಬೇಕು ಅಂತ ಕೇಳ್ತಿಲ್ಲ. ನನಗೆ ಅನೇಕ ಜನ ಪತ್ರ ಬರೆದಿದ್ದಾರೆ. ಅದೆಲ್ಲವನ್ನೂ ಹೇಳೋಕೆ ಆಗುತ್ತಾ? ಟ್ಯಾಕ್ಸ್ ಕಟ್ಟೋರು ಯಾರೂ ಬಂದು ಕೇಳಲ್ಲ ಎಂದರು.

ಮನೆ, ಸಂಸಾರ ಯಾರು ನಡೆಸುತ್ತಾರೆ ಅಂತ ಅವರ ಹೇಳಬೇಕು. ಅವರ ಮನೆ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡಲ್ಲ. ಒಂದು ಮನೆಗೆ ಒಂದು. ವೋಟರ್ ಲಿಸ್ಟ್ ನಲ್ಲಿ ಯಾರ ಮನೆ ಇದೆ ಅನ್ನೋ ಲೆಕ್ಕ ಇದೆ. ಎಪಿಎಲ್, ಬಿಪಿಎಲ್, ಅಂತ್ಯೋದಯ ಕಾರ್ಡ್ ಎಲ್ಲಾ ಲೆಕ್ಕ ಇದೆ. ಫಸ್ಟ್ ನೇಮ್ ಕೊಡಬೇಕಾ, ಸೆಕೆಂಡ್ ನೇಮ್ ಕೋಡಬೇಕಾ? ಹೆಣ್ಣುಮಕ್ಕಳು ತೀರ್ಮಾನ ಮಾಡಬೇಕು ಎಂದರು. 

Share this Story:

Follow Webdunia kannada

ಮುಂದಿನ ಸುದ್ದಿ

ಅಂಡರ್ ಪಾಸ್ ನಲ್ಲಿ ಸಿಲುಕಿದ ಲಾರಿ ಹೊರತೆಗೆಯಲು ಪೊಲೀಸರ ಹರಸಾಹಸ