Select Your Language

Notifications

webdunia
webdunia
webdunia
Sunday, 6 April 2025
webdunia

ವಿಧ್ವಂಸಕ ಕೃತ್ಯಗಳಿಗೆ ಅವಕಾಶವಿಲ್ಲ: ಬೊಮ್ಮಾಯಿ

ಬಸವರಾಜ ಬೊಮ್ಮಾಯಿ
ಬೆಂಗಳೂರು , ಬುಧವಾರ, 28 ಸೆಪ್ಟಂಬರ್ 2022 (14:04 IST)
ಬೆಂಗಳೂರು : ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತಿ ಪಡೆದವರಿದ್ದಾರೆ. ಅವರು ಅಲ್ಲಿಂದಲೇ ಕಾರ್ಯಾಚರಣೆ ಮಾಡುತ್ತಿದ್ದು, ಸಂಸ್ಥೆ ಹಲವಾರು ವರ್ಷ, ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂದರು.

ಕರ್ನಾಟಕದಾದ್ಯಂತ ವಿಧ್ವಂಸಕ ಕೃತ್ಯಗಳನ್ನು ನಡೆಸಿರುವುದು ಜಗಜ್ಜಾಹೀರಾಗಿದೆ. ದೇಶದ್ರೋಹಿ ಸಂಘಟನೆಗಳನ್ನು ನಿಷೇಧಿಸುವಂತೆ ಎಲ್ಲಾ ರಾಜ್ಯಗಳ ಜನ ಒಕ್ಕೊರಲಿನಿಂದ ಬೇಡಿಕೆ ಇಟ್ಟಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ನಿರಾಣಿ