Select Your Language

Notifications

webdunia
webdunia
webdunia
webdunia

ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಫೋಟೋ ಚಿತ್ರೀಕರಣ ನಿಷೇದ ಆದೇಶ ವಾಪಸ್

ಸರ್ಕಾರಿ ಕಚೇರಿಗಳಲ್ಲಿ ವಿಡಿಯೋ ಫೋಟೋ ಚಿತ್ರೀಕರಣ ನಿಷೇದ ಆದೇಶ ವಾಪಸ್
ಬೆಂಗಳೂರು , ಶನಿವಾರ, 16 ಜುಲೈ 2022 (17:08 IST)
ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ ತೆಗೆಯಬಾರದು ಮತ್ತು ವಿಡಿಯೋ ಮಾಡಬಾರದು ಎಂಬ ಆದೇಶವನ್ನು ಜುಲೈ 15 ರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸರ್ಕಾರ ವಾಪಸ್ ಪಡೆದಿದೆ. ಈ ಆದೇಶ ಸಾರ್ವಜನಿಕ ವಲಯದಲ್ಲಿ ತೀವ್ರ ವಿವಾದ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಸರ್ಕಾರ ತನ್ನ ನಿರ್ಧಾರವನ್ನು ವಾಪಸ್ ಪಡೆದಿದೆ.
ಸರ್ಕಾರಿ ಕಚೇರಿಗಳಲ್ಲಿ ಫೋಟೋ -ವೀಡಿಯೋ ತೆಗೆಯುವುದಕ್ಕೆ ನಿಷೇಧ ಹೇರಿ ಕರ್ನಾಟಕ ಸರ್ಕಾರ ಆದೇಶ ಪ್ರಕಟಿಸಿತ್ತು. ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಸರ್ಕಾರಿ ಕಚೇರಿಗಳಲ್ಲಿ ಫೋಟೋ ಅಥವಾ ವೀಡಿಯೋ ಮಾಡದಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿತ್ತು. ಸರ್ಕಾರಿ ಕಚೇರಿಗಳ ಫೋಟೋ ಅಥವಾ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಕಾರಣ ನೀಡಿ ಕರ್ನಾಟಕ ಸರ್ಕಾರ ಈ ಆದೇಶ ನೀಡಿತ್ತು. ಅಲ್ಲದೇ ವಿಶೇಷವಾಗಿ ಮಹಿಳಾ ನೌಕರರಿಗೆ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಉಲ್ಲೇಖಿಸಿ ಕರ್ನಾಟಕ ಸರ್ಕಾರ ಈ ಆದೇಶ ಪ್ರಕಟಿಸಿತ್ತು. ಆದರೀಗ ಈ ಆದೇಶ ವಿವಾದ ಸ್ವರೂಪ ಪಡೆದ ಬೆನ್ನಲ್ಲೇ ಸರ್ಕಾರ ತನ್ನ ನಿರ್ಧಾರ ಹಿಂಪಡೆದುಕೊಂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಯುವತಿ ಪ್ರೀತಿಸುವ ವಿಚಾರ - ಕೊಲೆಯಲ್ಲಿ ಅಂತ್ಯ