Webdunia - Bharat's app for daily news and videos

Install App

ಆಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ

Webdunia
ಬುಧವಾರ, 18 ಆಗಸ್ಟ್ 2021 (21:19 IST)

ತಾಲಿಬಾನ್ ಉಗ್ರರ ವಶದಲ್ಲಿ

ರುವ ಅಫ್ಘಾನಿಸ್ಥಾನದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕರ್ನಾಟಕ ರಾಜ್ಯದ ನಾಗರೀಕರನ್ನು ತವರಿಗೆ ವಾಪಸ್ ಕರೆತರಲು ರಾಜ್ಯ ಸರ್ಕಾರ ವಿಶೇಷ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದೆ.

ಈಗಾಗಲೇ ಕೇಂದ್ರ ಸರ್ಕಾರ ಆಫ್ಘಾನಿಸ್ತಾನದಲ್ಲಿರುವ ಭಾರತೀಯರನ್ನು ಕರೆತರಲು ಮತ್ತು ಅವರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ (Helpline) ಹಾಗೂ ಇ-ಮೇಲ್ ಸೇವೆಯನ್ನು ಕೂಡ ಆರಂಭಿಸಲಾಗಿದೆ. ಇದರ ನಡುವೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ  ನೀಡಿ, ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನ ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಭಾರತ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಫ್ಘಾನ್​ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ  ವಾಪಾಸ್ ಕರೆತರುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಈ ಕುರಿತು ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಅವರ ಆದೇಶದ ಅನುಸಾರ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಿಲುಕಿದ್ದಾರೆ. ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಮಾನಸಿಕ ಒತ್ತಡದಲ್ಲಿದ್ದಾರೆ. ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವ ಕೆಲಸ ಮಾಡಬೇಕು. ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ  ಮನವಿ ಮಾಡಲಾಗಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಇಂದು ಹೇಳಿಕೆ ನೀಡಿದ್ದರು. ನಮ್ಮ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇಂದು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments