Publish Date: Wed, 20 Nov 2019 (18:57 IST)
Updated Date: Wed, 20 Nov 2019 (18:59 IST)
ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಣಕ್ಕೆ ಇಳಿದಿದ್ದ ಜೆಡಿಎಸ್ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿಯುತ್ತಿದ್ದಾರೆ.
ಹಿರೇಕೆರೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿದ್ದ ರಟ್ಟಿಹಳ್ಳಿ ಕಬ್ಬಿಣ ಕಂತಿಮಠದ ಶಿವಲಿಂಗ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಕೆ.ಪಿ.ಬಚ್ಚೇಗೌಡರ ನಾಮಪತ್ರ ತಿರಸ್ಕೃತಗೊಂಡಿದೆ.
ಜೆಡಿಎಸ್ ನಲ್ಲಿ ಬಂಡಾಯ ಹಾಗೂ ಟಿಕೆಟ್ ಸಿಕ್ಕರೂ ಕಣದಿಂದ ಅಭ್ಯರ್ಥಿಗಳೇ ಹಿಂದೆ ಸರಿಯುತ್ತಿರೋದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಕ್ ನೀಡಿದಂತಾಗಿದೆ.