ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರು ಸಾಕಷ್ಟು ಸಂಖ್ಯೆಯಲ್ಲಿದ್ದು, ಮಹಾರಾಷ್ಟ್ರವನ್ನೂ ಹಿಂದಿಕ್ಕಿದೆ. ಅದರಲ್ಲೂ ಉತ್ತರ ಕನ್ನಡ ರಾಜ್ಯದಲ್ಲೇ ನಂ.1 ಸೋಂಕಿತರ ಜಿಲ್ಲೆಯಾಗಿದೆ. ಇದಕ್ಕೆ ಕಾರಣವೇನು ಗೊತ್ತಾ?
ಮೂಲಗಳ ಪ್ರಕಾರ, ಉತ್ತರ ಕನ್ನಡ ಜಿಲ್ಲೆಗೆ ಹೊರಗಿನಿಂದ ಬಂದವರಿಂದಲೇ ಸೋಂಕು ಹೆಚ್ಚಾಗಿದೆ ಎನ್ನಲಾಗಿದೆ. ಲಾಕ್ ಡೌನ್ ಘೋಷಿಸುತ್ತಿದ್ದಂತೇ ಬೇರೆ ರಾಜ್ಯಗಳಲ್ಲಿ, ನಗರಗಳಲ್ಲಿ ಉದ್ಯೋಗ ಮಾಡುತ್ತಿದ್ದವರು ತವರಿಗೆ ಬಂದಿಳಿದಿದ್ದಾರೆ.
ಇವರನ್ನು ತಡೆಯಲು ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿಯೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಂಕು ಹೆಚ್ಚಳವಾಗಿದೆ ಎನ್ನಲಾಗಿದೆ. ಪ್ರಧಾನಿ ಮೋದಿ ಕೂಡಾ ಉತ್ತರ ಕನ್ನಡ ಜಿಲ್ಲೆಯ ಸ್ಥಿತಿ ಗತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.