Select Your Language

Notifications

webdunia
webdunia
webdunia
webdunia

ದೋಸ್ತಿ ಸರಕಾರದಿಂದ ಉತ್ತರ ಕರ್ನಾಟಕ ನಿರ್ಲಕ್ಷ್ಯ: ಸಂಸದ ಪ್ರಲ್ಹಾದ ಜೋಶಿ

North Karnataka
ಹುಬ್ಬಳ್ಳಿ , ಶನಿವಾರ, 7 ಜುಲೈ 2018 (17:46 IST)
ಈ ಹಿಂದೆ ಪ್ರಧಾನಿಯಾಗಿದ್ದಾಗ ಹೆಚ್. ಡಿ. ದೇವೆಗೌಡರು ಉತ್ತರ ಕರ್ನಾಟಕ್ಕೆ ಅನ್ಯಾಯ ಮಾಡಿದರು. ಈಗ ಅವರ ಮಗ ರಾಜ್ಯದ ಮುಖ್ಯಮಂತ್ರಿಯಾಗಿ ಮೊದಲನೆ ಬಜೆಟ್‌ನಲ್ಲಿ ಉತ್ತರ ಕರ್ನಾಟಕವನ್ನು ಕಡೆಗಣಿಸುವ ಮೂಲಕ ತಂದೆಯ ಉತ್ತರ ಕರ್ನಾಟಕ ನಿರ್ಲಕ್ಷ್ಯ  ಧೋರಣೆಯನ್ನು ಮುಂದುವರೆಸಿದ್ದಾರೆ ಎಂದು ಮಾಜಿ ಪ್ರಧಾನಿ ದೇವೆಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿಯವರ ವಿರುದ್ಧ ಸಂಸದ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೊಸ್ತಿ ಸರ್ಕಾರದ ಮೊದಲ ಬಜೆಟ್ ನಲ್ಲಿ ಉತ್ತರ ಕರ್ನಾಟಕದಲ್ಲಿ ನಿರ್ಲಕ್ಷ್ಯ ಮಾಡಲಾಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉತ್ತರ ಕರ್ನಾಟಕದಲ್ಲಿ JDSಗೆ ಹೆಚ್ಚಿನ ಸೀಟ್ ಈ ಭಾಗದಲ್ಲಿ ಭಾರದೇ ಇರುವುದನ್ನು ಗಮನದಲ್ಲಿಟ್ಟುಕೊಂಡು ಈ ರೀತಿ ಮಾಡಿದ್ದಾರೆ ಎಂದು ಆರೋಪಿಸಿದರು.

ಮೈತ್ರಿ ಸರ್ಕಾರದ ಮೊದಲ ಬಜೆಟ್‌ನಲ್ಲಿ ಕೇವಲ ಮೂರ್ನಾಲ್ಕು ಜಿಲ್ಲೆಗಳಿಗೆ ಮಾತ್ರ ಅನುದಾನ ನೀಡಿವ ಮೂಲಕ ಕುಮಾರಸ್ವಾಮಿಯವರು ಜನರ ಕಣ್ಣಿಗೆ ಮಣ್ಣೆರಚಿದ್ದಾರೆ. ಒಂದು ಕೈಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಂಡಿದ್ದಾರೆ ಎಂದು ದೂರಿದರು. ಎಐಸಿಸಿ ಅಧ್ಯಕ್ಷರು ರಾಹುಲ್ ಗಾಂಧಿಯವರೇ ನಿಮ್ಮ ಸರ್ಕಾರ ಮಾಡಿದ ಸಾಲ ನಾವು ತೀರಿಸಿದ್ದೇವೆ, ಆದರೂ ನೀವು ಮೋದಿ ಸರ್ಕಾರಕ್ಕೆ ಚಾಲೆಂಜ್ ಮಾಡಿದ್ದೀರಾ ಆದರೆ ಈಗ ರಾಜ್ಯದಲ್ಲಿ ನಿಮ್ಮ ಸಹಭಾಗಿತ್ವದ ದೊಸ್ತಿ ಸರ್ಕಾರ ಪೆಟ್ರೋಲ್, ಡೀಸಲ್ ಬೆಲೆ ಏರಿಸಿದೆ ಇದರ ಕುರಿತು ರಾಹುಲ್ ಗಾಂಧಿಯವರು ತಮ್ಮ ನಿಲುವು ಸ್ಪಷ್ಟ ಪಡಿಸಬೇಕು ಎಂದು ಅಗ್ರಹಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮಳೆ ನೀರಿಗೆ ಕುಸಿದ ಬಾವಿ: ಆದ ಹಾನಿ ಎಷ್ಟು ಗೊತ್ತಾ?