ಈಶಾನ್ಯ ರಾಜ್ಯಗಳಾದ ಮೇಘಾಲಯ, ತ್ರಿಪುರ ಮತ್ತು ಅಸ್ಸಾಂನಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿಯಿಂದ ಇದುವರೆಗೆ 31ಮಂದಿ ಮಂದಿ ಬಲಿಯಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಅಸ್ಸಾಂ 28 ಜಿಲ್ಲೆಗಳ ಮೇಲೆ ಪರಿಣಾಮ ಬೀರಿದ್ದು, ಸುಮಾರು 19 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿದೆ. ಸುಮಾರು 1 ಲಕ್ಷ ಜನರು ಪುನರ್ವಸತಿ ಕೇಂದ್ರಗಳಲ್ಲಿ ಇದ್ದಾರೆ.
ಮೇಘಾಲಯದಲ್ಲಿ ಕಳೆದ ಎಡರಡು ದಿನಗಳಿಂದ ಸುರಿದ ಮಳೆಗೆ 12 ಮಂದಿ ಅಸುನೀಗಿದ್ದಾರೆ. ಮೇಘಾಲಯ ಸಿಎಂ ಮೃತ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ತ್ರಿಪುರದ ರಾಜಧಾನಿ ಅಗರ್ತಲಾದಲ್ಲಿ 6 ಗಂಟೆಯಲ್ಲಿ 144 ಮಿ.ಮೀ. ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟು ಮಳೆ 60 ವರ್ಷಗಳ ಇತಿಹಾಸದಲ್ಲೇ ಅತ್ಯಧಿಕ ಎಂದು ಹೇಳಲಾಗಿದೆ.