ಬೆಂಗಳೂರು : 2 ದಿನದಲ್ಲಿ ಶಾಲೆ ಆರಂಭದ ಬಗ್ಗೆ ಸರ್ಕಾರ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಇನ್ನೂ ಒಂದು ತಿಂಗಳು ಶಾಲೆ ಆರಂಭ ಸೂಕ್ತವಲ್ಲ ಎಂದು ಸರ್ಕಾರಕ್ಕೆ ಆರೋಗ್ಯ ಇಲಾಖೆ ಸಲಹೆ ನೀಡಿದ್ದಾರೆ.
ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದ ಕಾರಣ, ಸದ್ಯದ ಸ್ಥಿತಿಯಲ್ಲಿ 1 ತಿಂಗಳು ಶಾಲೆ ಆರಂಭ ಬೇಡ. ಪರಿಸ್ಥಿತಿ ಅವಲೋಕಿಸಿ ಸರ್ಕಾರ ತೀರ್ಮಾನಿಸಲಿ ಎಂದು ಆರೋಗ್ಯ ಇಲಾಖೆ ನಿರ್ದೇಶಕ ಓಂಪ್ರಕಾಶ್ ಸಲಹೆ ನೀಡಿದ್ದಾರೆ.
ಅ.12ರೊಳಗೆ ಶಾಲೆ ಆರಂಭದ ಬಗ್ಗೆ ನಿರ್ಧಾರ ಎಂದಿರೋ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಸಿಎಂ ಜೊತೆ ಮಹತ್ವದ ಸಭೆ ನಡೆಸಲಿದ್ದು, ಶಾಲೆ ಕಾಲೇಜು ಆರಂಭಿಸುವ ಕುರಿತು ಪ್ರಸ್ತಾಪ ಮಾಡಲಿದ್ದಾರೆ. ಒಂದು ಶಾಲೆ ತೆರೆದ್ರೆ ಮುಂದಿನ ಕ್ರಮದ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.