Select Your Language

Notifications

webdunia
webdunia
webdunia
webdunia

ಚಾಮುಂಡೇಶ್ವರಿಯಿಂದ ಸ್ಪರ್ಧಿಸಲ್ಲ - ಸಿದ್ದು

Not contested by Chamundeshwari
bangalore , ಸೋಮವಾರ, 18 ಜುಲೈ 2022 (19:15 IST)
ಮುಂದಿನ ವಿಧಾನಸಭಾ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವ ಪ್ರಶ್ನೆಯೇ ಇಲ್ಲ. ಪಕ್ಷದ ‌ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ‌ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್​​​​ವನದಲ್ಲಿ ನಡೆದ ಚಾಮುಂಡೇಶ್ವರಿ, ‌ಇಲವಾಲ ಬ್ಲಾಕ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ‌ ಪದಗ್ರಹಣ ಕಾರ್ಯಕ್ರಮದಲ್ಲಿ ‌ಅವರು ಮಾತನಾಡಿದರು. ಇದು ನನ್ನ ಕೊನೆಯ ಚುನಾವಣೆ, 2023 ನನ್ನ ಕೊನೆಯ ಚುನಾವಣಾ ಯುದ್ಧವಾಗಿದೆ. ನಾನು ರಾಜ್ಯಸಭಾ ಸದಸ್ಯತ್ವ ಸೇರಿದಂತೆ ಯಾವುದೇ ಸ್ಥಾನಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. 2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ JDSನ ಜಿಟಿ ದೇವೇಗೌಡ ವಿರುದ್ಧ ಸೋತಿದ್ದರು. ಆದರೆ ಅವರು ಬಾದಾಮಿಯಿಂದ ಬಿಜೆಪಿಯ ಶ್ರೀರಾಮುಲು ಅವರನ್ನು ಸೋಲಿಸಿ ಗೆದ್ದಿದ್ದಾರೆ. ಬಾದಾಮಿಯ ಜನ ತಮ್ಮ ಮೇಲೆ ನಂಬಿಕೆ ಇಟ್ಟು 2018 ರಲ್ಲಿ ವಿಧಾನಸೌಧಕ್ಕೆ ಕಳುಹಿಸಿದರು ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಅವಹೇಳನಕಾರಿ ಪೋಸ್ಟ್​​​​ ವಿರುದ್ಧ ದೂರು