Publish Date: Fri, 02 Feb 2018 (19:21 IST)
Updated Date: Fri, 02 Feb 2018 (19:22 IST)
ಪ್ರತಿಯೊಂದು ಸಾವನ್ನೂ ಮುಂದಿಟ್ಟುಕೊಂಡು ರಾಜಕೀಯ ಮಾಡುವುದು ರಾಜಕೀಯ ಪಕ್ಷಗಳಿಗೆ ಶೋಭೆ ತರುವುದಿಲ್ಲ ಎಂದು ಸಚಿವ ಯು.ಟಿ.ಖಾದರ ಹೇಳಿದ್ದಾರೆ.
ಸಂತೋಷ ಕೊಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾವನ್ನೂ ಯಾರೂ ಸಮರ್ಥಿಸಿಕೊಳ್ಳುವುದಿಲ್ಲ, ಖಂಡಿಸುತ್ತೇವೆ. ನೈಜ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು. ಆದರೆ, ಎಲ್ಲದರಲ್ಲೂ ರಾಜಕೀಯ ಮಾಡುವುದು ಸರಿಯಲ್ಲ ಎಂದಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯಾರ ಮನೆಗಾದರೂ ಭೇಟಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ನಮ್ಮ ಸೈನಿಕರ ಹತ್ಯೆ ಆಗುತ್ತಿರುವಾಗ ದೇಶದ್ರೋಹಿ ನವಾಜ್ ಷರೀಫ್ ಮನೆಗೆ ಹೋಗಿ ಪ್ರಧಾನಮಂತ್ರಿ ಚಹಾ ಕುಡಿದು ಬರುತ್ತಾರೆ. ಆದರೆ, ಹುತಾತ್ಮರ ಮನೆಗೆ ಭೇಟಿ ನೀಡಲ್ಲ ಎಂದು ಆರೋಪಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.