Publish Date: Thu, 04 Jan 2024 (18:23 IST)
Updated Date: Thu, 04 Jan 2024 (19:23 IST)
ಬೆಳಗಾವಿ, ಚಿಕ್ಕೋಡಿ ಎರಡು ಲೋಕಸಭಾ ಕ್ಷೇತ್ರದಲ್ಲೂ ನಾನು, ನಮ್ಮ ಕುಟುಂಬದ ಸದಸ್ಯರು ಯಾರೂ ಸ್ಪರ್ಧಿಸುವುದಿಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ಸಿಗಲಿದೆ. ನನಗೆ ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ಇಲ್ಲ. ಈ ಬಗ್ಗೆ ಹೈಕಮಾಂಡ್ ಏನು ಹೇಳುತ್ತದೋ ನೋಡೋಣ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.