Publish Date: Sun, 26 Feb 2023 (09:15 IST)
Updated Date: Sun, 26 Feb 2023 (09:53 IST)
ಬೆಳಗಾವಿ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಜೊತೆಗೆ ವೇದಿಕೆ ಹಂಚಿಕೊಳ್ಳಲು ನಾನು ಸಿದ್ಧ, ಅವರೇನು ನಮ್ಮ ವೈರಿನಾ? ಅವರು ನಮ್ಮ ಶಾಸಕರು ಎಂದು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ಎಂದು ತಿಳಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಫೆ.27ರಂದು ಪ್ರಧಾನಿ ಮೋದಿ ಬರುತ್ತಾರೆ. ಮಾ. 2ರಂದು ರಾಜಹಂಸಗಢ ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮ ಮುಗಿದ ಮೇಲೆ ರಾಜಕೀಯವಾಗಿ ಮಾತನಾಡೋಣ.
ಮಾರ್ಚ್ 2ರಂದು ಸಣ್ಣ ಪ್ರಮಾಣದಲ್ಲಿ ಸರ್ಕಾರಿ ಕಾರ್ಯಕ್ರಮ ಆಯೋಜನೆ ಮಾಡಿದ್ದೇವೆ. ಅದು ಬಿಜೆಪಿ ಕಾರ್ಯಕ್ರಮ ಅಲ್ಲ ಸರ್ಕಾರಿ ಕಾರ್ಯಕ್ರಮವಾಗಿದೆ. ಶಿಷ್ಟಾಚಾರಕ್ಕೆ ಅನುಗುಣವಾಗಿ ಕೆಲಸ ಆಗುತ್ತದೆ. ಆ ಶಾಸಕರಿಗೆ ಸಿಗುವಂತಹ ಮರ್ಯಾದೆ ಸಿಗಬೇಕು. ಒಳ್ಳೆಯ ರೀತಿ ಕಾರ್ಯಕ್ರಮ ಆಗಬೇಕು ಎಂದರು.