ತಮಿಳುನಾಡಿಗೆ ನೀರು ಬಿಡದಿರುವ ರಾಜ್ಯ ಸರಕಾರದ ನಿರ್ಧಾರ ಸರಿಯಾಗಿದೆ ಎಂದು ಮಾಜಿ ಸಿಎಂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಹೇಳಿದ್ದಾರೆ.
ಕಾವೇರಿ ಕಣಿವೆಯಲ್ಲಿ ಕುಡಿಯುವ ನೀರಿನ ಕೊರತೆಯಿರುವುದರಿಂದ ರಾಜ್ಯದ ಜನತೆಗೆ ತೀವ್ರ ತೊಂದರೆಯಾಗಿದೆ. ಇಂತಹ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ತಮಿಳುನಾಡಿನ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಿಯೋಗವೊಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ಅವರನ್ನು ಭೇಟಿ ಮಾಡಿ ಕುಡಿಯುವ ನೀರಿನ ಕೊರತೆ ಎದುರಾಗಿದ್ದರಿಂದ 3 ಟಿಎಂಸಿ ನೀರು ಬಿಡಿ ಎಂದು ಮನವಿ ಮಾಡಿತ್ತು.
ಆದರೆ, ಕಾವೇರಿ ಜಲಾಶಯದಲ್ಲಿ ಕೇವಲ 8.8 ಟಿಎಂಸಿ ನೀರಿನ ಸಂಗ್ರಹವಿದೆ. ಕಾವೇರಿ ಕೊಳ್ಳದಲ್ಲಿರುವ ಜನತೆಗೆ ಪ್ರತಿ ತಿಂಗಳು 3 ಟಿಎಂಸಿ ಕುಡಿಯುವ ನೀರಿನ ಅಗತ್ಯತೆಯಿರುವುದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಸುಭಾಷ್ ಕುಂಟಿಯಾ ತಳ್ಳಿಹಾಕಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.