Publish Date: Thu, 18 Oct 2018 (14:28 IST)
Updated Date: Thu, 18 Oct 2018 (14:30 IST)
ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳುವುದರ ಮೂಲಕ ಆಶ್ಚರ್ಯವನ್ನುಂಟು ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೂ ವಯಸ್ಸಾಗುತ್ತಾ ಬಂತು, ಮತ್ತೆ ಚುನಾವಣೆಗೆ ನಿಲ್ಲಲ್ಲ. ಚುನಾವಣಾ ರಾಜಕೀಯದಿಂದ ದೂರ ಉಳಿಯುವೆ ಎಂದು ಹೇಳಿದ್ದಾರೆ.
ಇದುವರೆಗೂ 13 ಚುನಾವಣೆಗಳಲ್ಲಿ ಸ್ಪರ್ಧಿಸಿ 8 ಬಾರಿ ಗೆದ್ದಿದ್ದೇನೆ. ಈಗ ವಯಸ್ಸು 71 ಆಗುತ್ತಾ ಬಂದಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಿಂದ ಗೆದ್ದಿದ್ದೇನೆ. ಈಗಾಗಲೇ 6 ತಿಂಗಳು ಕಳೆದಿದೆ. ಮುಂದಿನ ನಾಲ್ಕುವರೆ ವರ್ಷ ಇಲ್ಲೇ ಇರ್ತಿನಿ. ಬಾದಾಮಿ ಕ್ಷೇತ್ರದ ಅಭಿವೃದ್ಧಿ ಮಾಡುತ್ತೇನೆ. ಮತ್ತೆ ಚುನಾವಣೆಗೆ ನಿಲ್ಲಲ್ಲ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.