Select Your Language

Notifications

webdunia
webdunia
webdunia
Wednesday, 9 April 2025
webdunia

ಒಂದು ತಿಂಗಳು ಪದವಿ ಪರೀಕ್ಷೆ ಮುಂದೂಡುವಂತೆ ರಾಜ್ಯದ ವಿವಿಗಳಿಗೆ ಉನ್ನತ ಶಿಕ್ಷಣ ಇಲಾಖೆ' ಸೂಚನೆ

ವಿದ್ಯಾರ್ಥಿಗಳೇ ಗಮನಿಸಿ
bangalore , ಗುರುವಾರ, 17 ಫೆಬ್ರವರಿ 2022 (21:25 IST)
ಕೊರೊ ಮತ್ತು ಒಮೈಕ್ರಾನ್ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಪಾಠ-ಪ್ರವಚನಗಳು ಮುಗಿಯದ ಉನ್ನತ ಶಿಕ್ಷಣ ಇಲಾಖೆಗೆ ಒಳಪಡುವ ಎಲ್ಲಾ ವಿಶ್ವವಿದ್ಯಾಲಯಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡುವಂತೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯಕ್ ಅವರು ವಿ.ವಿ.ಗಳ ಕುಲಸಚಿವರಿಗೆ ಸೂಚಿಸಿದ್ದಾರೆ.
ಈ ಬಗ್ಗೆ ಬುಧವಾರ ಮಾಹಿತಿ ನೀಡಿದ್ದಾರೆ ಅವರು, `ಕೆಲವು ವಿ.ವಿ.ಗಳಿಗೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಆದರೆ, ಮೇಲೆ ನಮೂದಿಸಿದ ಕಾರಣಗಳನ್ನು ನೀಡಿ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ಪರೀಕ್ಷೆಯನ್ನು ಮುಂದೂಡುವಂತೆ ಕೋರಿದ್ದರು.
ಹೀಗಾಗಿ, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಗಮನಿಸಿ, ಪರೀಕ್ಷೆಯನ್ನು ಮುಂದೂಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಕೊರೊ ಮತ್ತು ಒಮೈಕ್ರಾನ್ ಸೋಂಕು ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದಾಗಿ ಬೋಧನಾ ಕಾರ್ಯ ಅಪೂರ್ಣ ಪದವಿ ಕೋರ್ಸ್‌ಗಳ ಸೆಮಿಸ್ಟರ್ ಪರೀಕ್ಷೆಯನ್ನು ಒಂದು ತಿಂಗಳಾದರೂ ಮುಂದೂಡಲು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪತ್ರದ ಮೂಲಕ ಅವರು, 'ಕೆಲವು ವಿ.ವಿ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. ಹೀಗಾಗಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡುವಂತೆ ಎಲ್ಲ ವಿವಿಗಳಿಗೆ ನಿರ್ದೇಶಿಸಬೇಕು' ಎಂದು ಅವರು ಕೋರಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ; ನಾನು ಅಪ್ಪಟ ದೇಶಭಕ್ತನೆಂದ ಸಚಿವ ಈಶ್ವರಪ್ಪ