Select Your Language

Notifications

webdunia
webdunia
webdunia
webdunia

ಜಮೀರ್ ಹೇಳಿದಾಕ್ಷಣ ಏನೂ ಆಗಲ್ಲ: ಮುಸ್ಲಿಮರ ಮೀಸಲಾತಿ ಹೆಚ್ಚಳ ಬಗ್ಗೆ ಪ್ರಹ್ಲಾದ್ ಜೋಶಿ ಗರಂ

Minister Zameer Ahmad

Sampriya

ಹುಬ್ಬಳ್ಳಿ , ಗುರುವಾರ, 13 ಮಾರ್ಚ್ 2025 (15:30 IST)
Photo Courtesy X
ಹುಬ್ಬಳ್ಳಿ: ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಜನರಿಗೆ ದ್ರೋಹ ಬಗೆಯುತ್ತಿದೆ. ಧರ್ಮಾಧಾರಿತ ಮೀಸಲಾತಿಯನ್ನು ಒಪ್ಪಲು ಸಾಧ್ಯವೇ ಇಲ್ಲ ಎಂದು ಮುಸ್ಲಿಮರ ಮೀಸಲಾತಿಯನ್ನು ಹೆಚ್ಚಿಸುವ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ ಅಹ್ಮದ್ ಮೀಸಲಾತಿಯನ್ನು ಶೇ10ಕ್ಕೆ ಹೆಚ್ಚಿಸಲು ಸೂಚನೆ ಕೊಟ್ಟ ತಕ್ಷಣ ಆಗುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಕೆಎಸ್​ಆರ್​ಟಿಸಿ, ಬಿಎಂಟಿಸಿ ನಷ್ಟದಲ್ಲಿರುವ ಬಗ್ಗೆ ಪ್ರತಿಕ್ರಯಿಸಿದ ಅವರು, KSRTC ವೈಪರ್ ಹಾಕುವುದಕ್ಕೂ ಇವರಲ್ಲಿ ಹಣವಿಲ್ಲ. ಸರ್ಕಾರಿ‌ ಇಲಾಖೆಗಳ ವಿದ್ಯುತ್ ಬಿಲ್ ಪಾವತಿ ಮಾಡುತ್ತಿಲ್ಲ, ಅದಕ್ಕೂ ಹಣ ಇಲ್ಲ. ಸರ್ಕಾರಿ ಬಸ್​ಗಳಿಗೆ ಡಿಸೇಲ್ ಹಾಕುವುದಕ್ಕೂ ದುಡ್ಡಿಲ್ಲ. ಶಾಲಾ ಮಕ್ಕಳ ಸಮಯಕ್ಕೆ ಸರಿಯಾದ ಬಸ್ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಬೇರೆ ಯಾವ ರಾಜ್ಯದಲ್ಲೂ ಇಲ್ಲದ ಗ್ಯಾರಂಟಿ ಅನುಷ್ಠಾನ ಸಮಿತಿ ಕರ್ನಾಟಕದಲ್ಲಿ ಯಾಕೆ? ರಾಹುಲ್ ಗಾಂಧಿ ಅವರು ಗ್ಯಾರಂಟಿ ಸಮಿತಿ ಅನುದಾನದ ಬಗ್ಗೆ ಹೇಳಬೇಕು. ಇದು ರಾಜ್ಯದ ಜನರಿಗೆ ಬಗೆದಿರುವ ದ್ರೋಹ. ದೊಡ್ಡದಾಗಿ ಮಾತನಾಡುವ ರಾಹುಲ್ ಗಾಂಧಿ ಈ ವಿಚಾರದ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

Ranya Rao: ರನ್ಯಾ ರಾವ್ ಚಿನ್ನ ಕಳ್ಳಸಾಗಣಿಕೆ ಮಾಡಲು ಕಲಿತಿದ್ದು ಇಲ್ಲೇ