Select Your Language

Notifications

webdunia
webdunia
webdunia
webdunia

ಗಾಬರಿ ಪಡುವಂತಹದ್ದೇನಿಲ್ಲ, ಗಟ್ಟಿಮುಟ್ಟಾಗಿದ್ದೇನೆ : ಸಿದ್ದರಾಮಯ್ಯ

ಚುನಾವಣೆ
ಬೆಂಗಳೂರು , ಶನಿವಾರ, 29 ಏಪ್ರಿಲ್ 2023 (14:53 IST)
ಬೆಂಗಳೂರು : ದಿನನಿತ್ಯ ಓಡಾಡುವ ಕಾರು ಬದಲಾಗಿರುವ ಕಾರಣ ಸೈಡ್ ಸ್ಟೆಪ್ ಇಲ್ಲದೆ ಕಾಲು ಜಾರಿ ಹಿಂದಕ್ಕೆ ಬೀಳಲು ಆಗಿದ್ದೆ. ಗಾಬರಿ ಪಡುವಂತಹದ್ದೇನಿಲ್ಲ, ನಾನು ಆರೋಗ್ಯವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ನಲ್ಲಿ ತಿಳಿಸಿದ್ದಾರೆ.
 
ಈ ವಿಚಾರವನ್ನು ಅತಿ ರಂಜಿತವಾಗಿ ವರದಿ ಮಾಡಿ ಜನ ಗಾಬರಿ ಪಡುವಂತೆ ಮಾಡಬೇಡಿ ಎಂದು ಸಿದ್ದು ಸುದ್ದಿಗಾರರಿಗೆ ವಿನಂತಿ ಮಾಡಿದ್ದಾರೆ.

ವಿಧಾನಸಭಾ ಚುನಾವಣೆ  ಹಿನ್ನೆಲೆ ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಅವರ ಪರವಾಗಿ ಪ್ರಚಾರಕ್ಕೆ ಶನಿವಾರ ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದರು.

ಬಳಿಕ ಕಾರಿನೊಳಗೆ ಕೂರಿಸಿ ಗ್ಲೂಕೋಸ್ ನೀಡಿದರು. ಗ್ಲೂಕೋಸ್ ಕುಡಿದ ಬಳಿಕ ಚೇತರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರ್ಯಕ್ರಮಕ್ಕೆ ತೆರಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕುಸ್ತಿಪಟುಗಳ ಭೇಟಿಯಾದ ಪ್ರಿಯಾಂಕಾ ಗಾಂಧಿ