Select Your Language

Notifications

webdunia
webdunia
webdunia
webdunia

ಬೆಂಗಳೂರಿನ 86 ಪಬ್, ಬಾರ್​​​​ಗಳಿಗೆ ನೋಟಿಸ್

ಬೆಂಗಳೂರಿನ 86 ಪಬ್, ಬಾರ್​​​​ಗಳಿಗೆ ನೋಟಿಸ್
bangalore , ಶನಿವಾರ, 21 ಅಕ್ಟೋಬರ್ 2023 (19:40 IST)
ರಾಜ್ಯ ರಾಜಧಾನಿಯಲ್ಲಿ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ BBMP ಅಧಿಕಾರಿಗಳು ಅಲರ್ಟ್ ಆಗಿದ್ದು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಬಿಎಂಪಿಯ ಆರೋಗ್ಯಾಧಿಕಾರಿಗಳು 12 ಪಬ್, ಬಾರ್‌ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ನೀಡಿದ್ದಾರೆ. ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದರು. ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118 ಉದ್ದಿಮೆಗಳಿಗೆ ಪರವಾನಿಗೆ ನೀಡಲಾಗಿದ್ದು, ಈ ಪೈಕಿ‌ 232 ಉದ್ದಿಮೆಗಳನ್ನು ಪರಿಶೀಲಿಸಲಾಗಿದೆ. ಅದರಲ್ಲಿ 86 ಉದ್ದಿಮೆಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. 12 ಉದ್ದಿಮೆಗಳನ್ನು ಬಂದ್​ ಮಾಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಮಸ್ಯೆ ಇಲ್ಲ ಅಂತ ಮ್ಯಾಚ್‌ ನೋಡಲು ಹೋಗಿದ್ರಾ?