Publish Date: Fri, 14 Jul 2023 (13:06 IST)
Updated Date: Fri, 14 Jul 2023 (13:05 IST)
ಬೆಂಗಳೂರು : ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಟಾಸ್ಕ್ ಫೋರ್ಸ್ ರಚನೆ ಮಾಡಿ ಮೊಟ್ಟೆ ವಿತರಣೆ ಕುರಿತು ನಿಗಾವಹಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಿಗೆ ಕಳಪೆ ಮೊಟ್ಟೆ ವಿತರಣೆ ಹಿನ್ನೆಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿಧಾನಸೌಧದಲ್ಲಿ ಮಾತನಾಡಿ, ಕಳಪೆ ಮೊಟ್ಟೆ ಪೂರೈಕೆ ಮಾಡಿದವರನ್ನ, ಪೂರೈಕೆ ಮಾಡುವವರನ್ನ ಕಪ್ಪು ಪಟ್ಟಿಗೆ ಸೇರಿಸಲು ಸೂಚನೆ ನೀಡಿದ್ದೇನೆ. ಜೊತೆಗೆ ಮೊಟ್ಟೆ ವಿತರಕರ ಪಟ್ಟಿಯಿಂದಲೂ ಅವರನ್ನ ಕೈಬಿಡಲಾಗುವುದು ಎಂದು ಎಂದು ಎಚ್ಚರಿಸಿದ್ದಾರೆ.