Daily Horoscope
✕

10 ದಿನಗಳೊಳಗೆ ಉತ್ತರ ಕೊಡುವಂತೆ ಬಿ.ಕೆ ಹರಿಪ್ರಸಾದ್‌ಗೆ ನೋಟಿಸ್

Webdunia
ಬುಧವಾರ, 13 ಸೆಪ್ಟಂಬರ್ 2023 (10:09 IST)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ ಹರಿಪ್ರಸಾದ್ ಗೆ ನೋಟಿಸ್ ನೀಡಲಾಗಿದೆ.

ಎಐಸಿಸಿ ಶಿಸ್ತು ಸಮಿತಿಯಿಂದ ಈ ನೋಟಿಸ್ ನೀಡಲಾಗಿದ್ದು, 10 ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ. ಕಳೆದ ಶನಿವಾರ ಅತಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಹರಿಪ್ರಸಾದ್ ಅವರು ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು. ಹಿಂದಿನ ಯಾವ ಮುಖ್ಯಮಂತ್ರಿಗಳೂ ಜಾತಿ ರಾಜಕಾರಣ ಮಾಡಲಿಲ್ಲ.

ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಪಂಚೆ ಹಾಕಿಕೊಂಡು ವಾಚ್ ಕಟ್ಟಿಕೊಂಡು ಖಾಕಿ ಚಡ್ಡಿ ಹಾಕೊಂಡು, ಸಮಾಜವಾದಿ ಅಂತಾ ಹೇಳಿದರೆ ಆಗುವುದಿಲ್ಲ. ದೇವರಾಜ ಅರಸು ಕಾರಿನಲ್ಲಿ ಹೋದಾಕ್ಷಣ ದೇವರಾಜು ಅರಸು ಆಗುವುದಿಲ್ಲ, ಅವರ ಚಿಂತನೆ ಇರಬೇಕು ಎಂದಿದ್ದರು.

ಈ ಸಂಬಂಧ ಹೈಕಮಾಂಡ್ ಬಳಿ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಹರಿಪ್ರಸಾದ್ ಅವರಿಗೆ ನೋಟಿಸ್ ಜಾರಿ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುವತಿಯನ್ನು ಕೂದಲು ಹಿಡಿದು ದರ ದರ ಎಳೆದ ವ್ಯಕ್ತಿ: ಕೋಲ್ಕತ್ತಾದಲ್ಲಿ ಶಾಕಿಂಗ್ ಘಟನೆ Video

ವ್ಯಾನಿಟಿ ಬ್ಯಾಗ್ ನಿಂದ ಮೊಬೈಲ್ ಕದ್ದ ಕಳ್ಳಿ: ಜುಟ್ಟು ಹಿಡಿದು ಕಿತ್ತಾಡಿದ ಮಹಿಳೆಯರು Video

ಗಾತ್ರ ಮುಖ್ಯವಲ್ಲ ಗತ್ತು ಮುಖ್ಯ… ಆನೆಗಳ ಜಗಳ ಬಿಡಿಸಲು ಹೋದ ನಾಯಿ: ಫನ್ನಿ Video

ಗುವಾಹಟಿಯಲ್ಲಿ ಭೀಕರ ಗುಂಡಿನ ದಾಳಿ, ಐವರ ದಾರುಣ ಸಾವು: ಭೀಕರ ದೃಶ್ಯ ಇಲ್ಲಿದೆ Video

Karnataka Weather: ಕರ್ನಾಟಕ ಪ್ರಮುಖ ಜಿಲ್ಲೆಗಳಲ್ಲಿ ಇಂದಿನ ಹವಾಮಾನ ವರದಿ

ಮುಂದಿನ ಸುದ್ದಿ
Show comments