Publish Date: Sat, 23 Sep 2017 (13:09 IST)
Updated Date: Sat, 23 Sep 2017 (13:11 IST)
ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಆಪ್ತ ಸಹಾಯಕ ಅಪಹರಣ, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾಲಕ್ಷ್ಮಿ ಠಾಣೆ ಪೊಲೀಸರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ಠಾಣೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಎಸಿಪಿ ಬಡಿಗೇರ್ ಅವರಿಗೆ ಮನವಿ ಸಲ್ಲಿಸಿ, ಬಿಎಸ್‌ವೈ ಅವರನ್ನು ವಿಚಾರಣೆಗೆ ಕರೆಸಬಾರದು. ಅವರ ಮನೆಗೆ ನೀವೇ ತೆರಳಿ ವಿಚಾರಣೆ ನಡೆಸಬೇಕು ಎಂದು ಕೋರಿದ್ದಾಗಿ ಮೂಲಗಳು ತಿಳಿಸಿವೆ.
ಯಡಿಯೂರಪ್ಪ ಆಪ್ತ ಸಹಾಯಕ ವಿನಯ್ ಕೂಡಾ ಇಂದು ವಿಚಾರಣೆಗೆ ಹಾಜರಾಗಬೇಕು ಎಂದು ಈಗಾಗಲೇ ಪೊಲೀಸ್ ಇಲಾಖೆ ನೋಟಿಸ್ ಜಾರಿ ಮಾಡಿದೆ.
ಪೊಲೀಸ್ ಇಲಾಖೆ ಸರಕಾರದ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.