ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಸ್ಥಾನದ ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ 1.38 ಕೋಟಿ ತೆರಿಗೆ ಕಟ್ಟುವಂತೆ ಆದಾಯ ತೆರಿಗೆ ಇಲಾಖೆ ದೇವಸ್ಥಾನದ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ.
2015-16ನೇ ಸಾಲಿನಲ್ಲಿ ರಾಮಚಂದ್ರಾಪುರ ಮಠದಿಂದ ದೇವಸ್ಥಾನದ ಆಡಳಿತ ನಡೆಸುತ್ತಿದ್ದ ಸಂದರ್ಭದಲ್ಲಿ ಹಣಕಾಸಿನ ವ್ಯವಹಾರದಲ್ಲಿ ವ್ಯತ್ಯಯ ಕಂಡು ಬಂದ ಹಿನ್ನೆಲೆ ಆಡಳಿತ ಮಂಡಳಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ.
ಈ ಕುರಿತು ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವ ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಶ್ರೀಕೃಷ್ಣ ಅವರ ನೇತೃತ್ವದಲ್ಲಿ ಇರುವ ದೇವಸ್ಥಾನ ಆಡಳಿತ ಮಂಡಳಿಯು ತುರ್ತಾಗಿ ಆನ್ ಲೈನ್ ಮೂಲಕ ದೇವಸ್ಥಾನ ಉಸ್ತುವಾರಿ ಸಮಿತಿ ಸಭೆ ನಡೆಸಿದೆ. ಈ ಸಭೆಯಲ್ಲಿ ತಕ್ಷಣದಲ್ಲಿ ದಂಡ ಪಾವತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ತೀರ್ಮಾನಿಸಿದರು.