Daily Horoscope
✕

ನ.1 ಪುನೀತ್ ರಾಜಕುಮಾರ್ ಕರ್ನಾಟಕ ರತ್ನ

Webdunia
ಶುಕ್ರವಾರ, 5 ಆಗಸ್ಟ್ 2022 (18:57 IST)
ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವದಂದು ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಅಕೃತ ಘೋಷಣೆ ಮಾಡಿದರು.
ಲಾಲ್‍ಬಾಗ್‍ನಲ್ಲಿಂದು ಆರಂಭವಾದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭಿಮಾನಿಗಳ ಒತ್ತಾಸೆಯಂತೆ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಮ್ಮ ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ನವೆಂಬರ್ 1ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ ಎಂದು ಹೇಳಿದರು.
 
ಪ್ರಶಸ್ತಿಗಾಗಿ ಡಾ.ರಾಜ್‍ಕುಮಾರ್ ಕುಟುಂಬದ ಸದಸ್ಯರು ಹಾಗೂ ಸರ್ಕಾರದ ವತಿಯಿಂದ ಸಮಿತಿಯನ್ನು ರಚಿಸಲಾಗುವುದು. ಕಾರ್ಯಕ್ರಮ ಯಾವ ರೀತಿ ಇರಬೇಕು ಎಂಬುದು ಸೇರಿದಂತೆ ಅವರ ಸಹೋದರರ ಸಲಹೆ ಪಡೆದು ತೀರ್ಮಾನಿಸುವುದಾಗಿ ತಿಳಿಸಿದರು.
 
ಇಂದಿನಿಂದ ಆರಂಭವಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ನಿರೀಕ್ಷೆಗೂ ಮೀರಿದ ಬೆಂಬಲ ಸಾರ್ವಜನಿಕರಿಂದ ವ್ಯಕ್ತವಾಗಿದೆ. ಆ.15ರವರೆಗೆ ನಡೆಯಲಿದ್ದು, ಲಕ್ಷಾಂತರ ಮಂದಿ ಆಗಮಿಸುವ ಸಾಧ್ಯತೆ ಇದೆ ಎಂದರು. ತೋಟಗಾರಿಕೆ ಇಲಾಖೆ ಸಚಿವರಾದ ಮುನಿರತ್ನ ಹಾಗೂ ಇತರ ಅಧಿಕಾರಿಗಳು ಬಹಳ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ಆಯೋಜಿಸಿದರು. ಇದಕ್ಕಾಗಿ ನಾನು ಅವರಿಗೆ ವಿಶೇಷವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments