Publish Date: Thu, 14 Apr 2022 (20:05 IST)
Updated Date: Thu, 14 Apr 2022 (20:10 IST)
ಉಡುಪಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಗುತ್ತಿಗೆದಾರ ಸಂತೋಷ್ ನಿರ್ವಹಿಸಿರುವ ₹ 4 ಕೋಟಿ ಬಿಲ್ತಕ್ಷಣ ಬಿಡುಗಡೆ ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ. ಸಂತೋಷ್ ಕುಟುಂಬಕ್ಕೆ ₹ 1 ಕೋ ಟಿ ಪರಿಹಾರ ನೀಡಬೇಕು. ಪತ್ನಿಗೆ ಸರ್ಕಾರಿ ಕೆಲಸ ನೀಡಬೇಕು. ಆತ್ಮಹತ್ಯೆ ಪ್ರಕರಣದಲ್ಲಿ ಮೂವರ ವಿರುದ್ಧ ಎಫ್ಐಆರ್ ಆಗಿದ್ದರೂ , ಈವರೆಗೆ ಆರೋಪಿಗಳನ್ನು ಬಂಧಿಸಿಲ್ಲ. ಮೂವರನ್ನೂ ಬಂಧಿಸಲು ಬೇಕಿರುವಷ್ಟು ಸಾಕ್ಷ್ಯಗಳು ಸಂತೋಷ್ ಮೊಬೈಲ್ನಲ್ಲಿದೆ. ಸಾಕ್ಷ್ಯ ತಿರುಚಲು ಹುನ್ನಾರ ನಡೆಯುತ್ತಿರುವ ಶಂಕೆಯಿದೆ ಎಂದು ಅಭಿಪ್ರಾಯಪಟ್ಟರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾಮಾಡಬೇಕು, ಬಂಧಿಸಿ, ಶಿಕ್ಷೆ ವಿಧಿಸಬೇಕು. ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಒತ್ತಾಯಿಸಿದರು.