Webdunia - Bharat's app for daily news and videos

Install App

ಶಿಶುಪಾಲನಾ ಕೇಂದ್ರ ತೆರೆಯುವ ಸರ್ಕಾರದ ನಿರ್ಧಾರಕ್ಕೆ ವಿರೋಧ

Webdunia
ಮಂಗಳವಾರ, 8 ಆಗಸ್ಟ್ 2023 (16:02 IST)
ಶಿಶುಪಾಲನಾ ಕೇಂದ್ರ ತೆರೆಯುವ ಸರ್ಕಾರದ ನಿರ್ಧಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.ಶಿಶುಪಾಲನಾ ಕೇಂದ್ರಗಳನ್ನು ತೆರೆಯುವ ಬದಲು ಅಂಗನವಾಡಿಗಳನ್ನು ಬಲಪಡಿಸಿ ಸಿಎಂ ಗೆ ಪತ್ರ ಬರೆಯಲು ಅಂಗನವಾಡಿ ಕಾರ್ಯಕರ್ತೆಯರ ಫೆಡರೇಶನ್ ಮುಂದಾಗಿದೆ.ನರೇಗಾ ಯೋಜನೆಯಡಿ ಕೆಲಸಕ್ಕೆ ತೆರಳುವ ಮಹಿಳೆಯರ ಮಕ್ಕಳನ್ನು ಬಿಟ್ಟು ಹೋಗಲು ಈ ಕೇಂದ್ರಗಳನ್ನು ತೆರೆಯಲಾಗಿದೆ.
 
ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ.ಪ್ರತಿದಿನ ಒಂಭತ್ತರಿಂದ ಸಂಜೆ ಆರರವರೆಗೆ ಈ ಕೇಂದ್ರಗಳು ಡೇ ಕೇರ್ ಮಾದರಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆ.ಮಕ್ಕಳ ಪಾಲನೆ, ಆಟ, ಊಟದ ವ್ಯವಸ್ಥೆ ಇರುವ ಶಿಶು ಕೇಂದ್ರಗಳು ಮಿನಿ ಅಂಗನವಾಡಿ ಕೇಂದ್ರಗಳಂತೆ ಕಾರ್ಯ ನಿರ್ವಹಿಸುತ್ತವೆ.ಈಗಾಗಲೇ ರಾಜ್ಯದಲ್ಲಿ ಇರುವ ಅಂಗನವಾಡಿ ಕೇಂದ್ರಗಳಿಗೇ ಸರಿಯಾದ ವ್ಯವಸ್ಥೆ ಇಲ್ಲ.ಇಂತಹದರಲ್ಲಿ ಶಿಶು ಪಾಲನಾ ಕೇಂದ್ರ ನಿರ್ಮಿಸುವ ಅಗತ್ಯ ಏನಿದೆ?ಶಿಶುಪಾಲನಾ ಕೇಂದ್ರಗಳು ಪಂಚಾಯತ್ ರಾಜ್ ಅಡಿಯಲ್ಲಿ ಬಂದರೂ ನಿರ್ವಹಣೆಗೆ ಮಾಡೋದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಡಿಯಲ್ಲಿಯೇ ಅಂಗನವಾಡಿ ಕೇಂದ್ರಗಳು ಬರುತ್ತವೆ.ಸಪರೇಟ್ ಕೇಂದ್ರಗಳನ್ನು ತೆರೆಯುವ ಬದಲು ಅಂಗನವಾಡಿಗಳನ್ನೇ ಅಭಿವೃದ್ದಿಪಡಿಸಿ ಅನ್ನೋದು ರಾಜ್ಯ ಅಂಗನವಾಡಿ ನೌಕರರ ಮತ್ತು ಸಹಾಯಕಿಯರ  ಫೆಡರೇಶನ್ ಆಗ್ರಹವಾಗಿದೆ.ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಗೆ ಪತ್ರ ಬರೆಯಲು ಫೆಡರೇಶನ್ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments