Select Your Language

Notifications

webdunia
webdunia
webdunia
webdunia

ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಎನ್ಎಸ್ಎಸ್ ಪಾತ್ರ ಅಪಾರ : ಗೆಹ್ಲೋಟ್

ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಎನ್ಎಸ್ಎಸ್ ಪಾತ್ರ ಅಪಾರ  : ಗೆಹ್ಲೋಟ್
ಬೆಂಗಳೂರು , ಭಾನುವಾರ, 11 ಸೆಪ್ಟಂಬರ್ 2022 (08:10 IST)
ಬೆಂಗಳೂರು : ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶವು ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪುಗೊಳಿಸುವುದರ ಜೊತೆಗೆ ಸಹಿಷ್ಣುತೆ,

ಸಹಭಾಗಿತ್ವ, ಸೇವೆ ಮತ್ತು ಸಹಾನುಭೂತಿ, ಸ್ವಾವಲಂಬನೆ ಮತ್ತು ದೇಶ ಪ್ರೇಮದ ಗುಣಗಳನ್ನು ಸಾರ್ವಜನಿಕ ಹಿತಾಸಕ್ತಿ ಮೈಗೂಡಿಸಿಕೊಳ್ಳುವಂತೆ ಮಾಡುವುದು ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.

ರಾಜ್ಯ ರಾಷ್ಟ್ರೀಯ ಸೇವಾ ಯೋಜನೆ ಕೋಶ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯ ಎನ್ಎಸ್ಎಸ್ ಕೋಶ ವತಿಯಿಂದ ರಾಜಭವನದ ಗಾಜಿನ ಮನೆಯಲ್ಲಿ ಆಯೋಜಿಸಿದ್ದ 2020-21ನೇ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರವು ʼಸಬ್ಕಾ ಸಾಥ್, ಸಬ್ಕಾ ವಿಕಾಸ್ʼ ಎಂಬ ಧ್ಯೇಯವಾಕ್ಯದೊಂದಿಗೆ ʼಏಕ್ ಭಾರತ್, ಶ್ರೇಷ್ಠ ಭಾರತʼ ಧ್ಯೇಯದಲ್ಲಿ ಕೆಲಸ ಮಾಡುತ್ತಿದೆ.

ಸೇವಾ ಕಾರ್ಯಕ್ರಮಗಳು, ಮಹಿಳೆಯರ ಸ್ಥಿತಿ ಸುಧಾರಣೆ, ವಿಪತ್ತು ಪರಿಹಾರ ಮತ್ತು ಪುನರ್ವಸತಿ ಕಾರ್ಯಕ್ರಮಗಳಿಗೆ ಹಾಗೂ ಸಾಮಾಜಿಕ ಅನಿಷ್ಟಗಳು, ಹಿಂಸಾಚಾರ-ವಿರೋಧಿ, ಯೋಗ ಮುಂತಾದ ಪ್ರಮುಖ ಕಾರ್ಯಕ್ರಮಗಳ ಪ್ರಚಾರ ಮತ್ತು ಅನುಷ್ಠಾನದಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ ಎಂದು ಶ್ಲಾಘಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಈ ಬಾರಿ ದಸರಾ ರಾಷ್ಟ್ರಪತಿ ಮುರ್ಮುರಿಂದ ಉದ್ಘಾಟನೆ