ಜಾಗತಿಕವಾಗಿ ಸವಾಲಾಗಿ ಜೀವಹಾನಿಗೆ ಕಾರಣವಾಗುತ್ತಿರುವ ಕೊರೊನಾ ವೈರಸ್ ಪೀಡಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ.
ಭಾರತದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಸೆಂಚುರಿ ಗಡಿ ದಾಟಿದೆ. ಈ ವರೆಗೆ 107 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.
ಆರೋಗ್ಯ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳುತ್ತಿದೆಯಾದರೂ ರೋಗ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವುದು ಜನತೆಯಲ್ಲಿ ಕಳವಳಕ್ಕೆ ಕಾರಣವಾಗಿದೆ.
ರಾಷ್ಟ್ರ ರಾಜಧಾನಿ ನವದೆಹಲಿ ಹಾಗೂ ಕಲಬುರಗಿಯಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. ಕೊರೊನಾ ವೈರಸ್ ಒಂದು ವಿಪತ್ತು ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದ್ದು, ಅಗತ್ಯ ಕ್ರಮಕ್ಕೆ ಮುಂದಾಗಿದೆ.