ವಿದ್ಯುತ್ ಸಂಪರ್ಕ ಪಡೆಯಲು (ಓ.ಸಿ) ವಾಸ್ತವ್ಯ ಪತ್ರ ಕಡಾಯವಲ್ಲ ಸರ್ಕಾರ ಆದೇಶ

Webdunia
ಶನಿವಾರ, 2 ಜುಲೈ 2022 (15:46 IST)
ವಾಸ್ತವ್ಯ ಪ್ರಮಾಣ ಪತ್ರ (ಓಸಿ) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಲ್ಪಟ್ಟಿದ್ದ ಬೆಂಗಳೂರಿನ ನಾಗರಿಕರಿಗೆ ರಾಜ್ಯ ಸರಕಾರ ಸಿಹಿ ಸುದ್ದಿ ನೀಡಿದೆ.
 
ವಿದ್ಯುತ್ ಸಂಪರ್ಕ ಪಡೆಯುವುದಕ್ಕೆ ಓಸಿ ಕಡ್ಡಾಯ ಎಂಬ ನಿಯಮವನ್ನು ತೆಗೆದು ಹಾಕಲಾಗಿದ್ದು, ಈ ಸಂಬಂಧ ನಗರಾಭಿವೃದ್ಧಿ ಇಲಾಖೆ ಹೊರಡಿಸಿದ್ದ ತಿದ್ದುಪಡಿ ಆದೇಶಕ್ಕೆ ಶುಕ್ರವಾರ ರಾತ್ರಿ ರಾಜ್ಯಪತ್ರ ಹೊರಡಿಸಲಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು ಐದು ಲಕ್ಷ ಕುಟುಂಬಗಳಿಗೆ ಇದರಿಂದ ಅನುಕೂಲವಾಗಲಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಜಾರಿಗೆ ಬಂದಿದ್ದ ಈ ಕತ್ತಲೆ ಭಾಗ್ಯದ ಕಾನೂನನ್ನು ನಮ್ಮ ಸರಕಾರ ಬದಲಾಯಿಸಿದ್ದು, ಎಲ್ಲರ ಮನೆಯಲ್ಲೂ ಬೆಳಕು ಮೂಡಲಿದೆ ಎಂದು ಇಂಧನ, ಕನ್ನಡ- ಸಂಸ್ಕೃತಿ ಸಚಿವ ವಿ. ಸುನೀಲ್ ಕುಮಾರ್ ಟ್ವೀಟ್ ಮೂಲಕ ಹೊಸ ಆದೇಶದ ಮಾಹಿತಿ ಹಂಚಿಕೊಂಡಿದ್ದಾರೆ.
 
ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ನೆಪ‌ ನೀಡಿ ಮನೆ, ವಸತಿ ಸಮುಚ್ಚಯಗಳಿಗೆ ಬಿಬಿಎಂಪಿ ವಾಸ್ತವ್ಯ ಪ್ರಮಾಣ ಪತ್ರ ನಿರಾಕರಿಸಿದ್ದರೆ ಅಂಥ ಮನೆ ಹಾಗೂ ಫ್ಲಾಟ್ ಗಳಿಗೆ ವಿದ್ಯುತ್ ಸಂಪರ್ಕ ನೀಡದಂತೆ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಅಂದಿನ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದರು. ‌ಇದರಿಂದ ಸುಮಾರು ಐದು ಲಕ್ಷಕ್ಕೂ ಹೆಚ್ಚು ಕುಟುಂಬಗಳು ವಿದ್ಯುತ್ ಸಂಪರ್ಕವಿಲ್ಲದೇ ತೊಂದರೆಗೆ ಒಳಗಾಗಿದ್ದವು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments