ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಚರ್ಚೆ ನಡೆಸಲು ಮುಂದಾಗಿರುವ ನಾಯಕರಿಗೆ ಈಗ ಒಂದು ಅಡ್ಡಿ ಎದುರಾಗಿದೆ. ಅದೇನೆಂದು ಇಲ್ಲಿದೆ ನೋಡಿ ವಿವರ.
ಸಂಕ್ರಾಂತಿ ವೇಳೆಗೆ ರಾಜ್ಯ ನಾಯಕತ್ವ ಬದಲಾವಣೆ ವಿಚಾರವಾಗಿ ಹೈಕಮಾಂಡ್ ಬುಲಾವ್ ನೀಡಿ ಮಾತುಕತೆ ನಡೆಸಬಹುದು ಎಂದು ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣ ಕಾಯುತ್ತಿದೆ. ಈ ಹಿಂದೆ ಹೊಸ ವರ್ಷದ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿದೇಶ ಯಾತ್ರೆಯಿಂದಾಗಿ ಮಾತುಕತೆ ಮುಂದೂಡಿಕೆಯಾಗಿದೆ ಎನ್ನಲಾಗಿತ್ತು.
ಆದರೆ ಈಗ ಸೋನಿಯಾ ಗಾಂಧಿ ಭಾರತದಲ್ಲಿದ್ದರೂ ಅವರಿಗೆ ಅನಾರೋಗ್ಯವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ಸೋನಿಯಾ ಗಾಂಧಿಗೆ ಪದೇ ಪದೇ ಅನಾರೋಗ್ಯ ಸಮಸ್ಯೆ ಕಾಡುತ್ತಿದೆ. ಇದೀಗ ಅವರು ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸದ್ಯಕ್ಕೆ ಅವರು ಅನಾರೋಗ್ಯಕ್ಕೀಡಾಗಿರುವುದರಿಂದ ಮತ್ತೆ ರಾಜ್ಯ ರಾಜಕೀಯ ಚಟುವಟಿಕೆಗಳು ಮುಂದೂಡಿಕೆಯಾಗಲಿವೆ. ಸೋನಿಯಾ ಚೇತರಿಸಿಕೊಂಡ ಬಳಿಕವಷ್ಟೇ ರಾಜ್ಯದಲ್ಲಿ ಅಧಿಕಾರ ಹಂಚಿಕೆ ಅಥವಾ ಸಂಪುಟ ವಿಸ್ತರಣೆ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುವ ಸಾಧ್ಯತೆಯಿದೆ.