Select Your Language

Notifications

webdunia
webdunia
webdunia
webdunia

ಸಹಜವಾಗಿ ನನ್ನ ಕುಟುಂಬಕ್ಕೆ ಟಿಕೆಟ್‌ ಆಕಾಂಕ್ಷಿಯಾಗಿದ್ದೇನೆ: ಸಚಿವ ಕೆ.ಎಚ್‌.ಮುನಿಯಪ್ಪ

LokhSabha Election 2024

Sampriya

ಬೆಂಗಳೂರು , ಗುರುವಾರ, 28 ಮಾರ್ಚ್ 2024 (18:31 IST)
Photo Courtesy Muniyappa Facebook
ಬೆಂಗಳೂರು: ಕಾಂಗ್ರೆಸ್ ಪಕ್ಷ ಕುಟುಂಬದ ಹಲವರಿಗೆ ಟಿಕೆಟ್ ನೀಡಿದೆ. ನಾನು ಕೇಂದ್ರ ಮಟ್ಟದ ರಾಜಕಾರಣದಲ್ಲಿ ಗುರತಿಸಿಕೊಂಡಿದ್ದರಿಂದ ಸಹಜವಾಗಿ ನನ್ನ ಕುಟುಂಬಕ್ಕೆ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದರು.

ಇಂದು ಮಾಧ್ಯಮದ ಜತೆ ಮಾತನಾಡಿದ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಗೆಲ್ಲಿಸಿಕೊಂಡು ಬರುವ ಭರವಸೆಯನ್ನು ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಿಗೆ ನಾನು ನೀಡಿದ್ದೇನೆ ಎಂದರು.

ಇದೊಂದು ರಾಜೀನಾಮೆ ನಾಟಕ: ಕೋಲಾರ ರಾಜಕೀಯ ವಲಯದಲ್ಲಿ ಉಂಟಾಗಿರುವ ರಾಜೀನಾಮೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಿನ್ನೆ ನಡೆದಿರುವ ರಾಜೀನಾಮೆಯ ಪ್ರಹಸನ ನನಗೆ ಆಶ್ಚರ್ಯ ಉಂಟುಮಾಡಿದೆ. ಈ ರಾಜೀನಾಮೆ ಎಂಬುದು ನಾಟಕವಾಗಿದೆ. ಯಾರೂ ರಾಜೀನಾಮೆ ಕೊಡುವುದಿಲ್ಲ ಎಂದರು.

ಕಾಂಗ್ರೆಸ್ ಪಕ್ಷ ಒಂದು ಕುಟುಂಬವಿದ್ದಂತೆ. ಈ ಜಗಳ ಹಾಗೂ ಮನಸ್ತಾಪಗಳನ್ನು ನಮ್ಮ ಹಂತದಲ್ಲಿಯೇ ಬಗೆಹರಿಸಿಕೊಂಡು ಮುನ್ನಡೆಯಬೇಕಾಗಿದೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರರಂಗದಲ್ಲಿ ರಚಿತಾ ಶ್ರಮ ಎದ್ದು ಕಾಣುತ್ತಿದೆ: ಡಿಂಪಲ್‌ ಕ್ವೀನ್‌ 'ಮ್ಯಾಟ್ನಿ' ಲುಕ್‌ಗೆ ದರ್ಶನ್ ಫಿದಾ