Webdunia - Bharat's app for daily news and videos

Install App

ಅಧಿಕಾರ ಸಿಕ್ಕರೆ ರಾಜ್ಯದ ಚಿತ್ರಣವೇ ಬದಲು: ಮಾಜಿ ಸಿಎಂ ಎಚ್‍ಡಿಕೆ

Webdunia
ಶುಕ್ರವಾರ, 13 ಮೇ 2022 (08:11 IST)
ಬೆಂಗಳೂರು: ಜೆಡಿಎಸ್‌ಗೆ ಸ್ವತಂತ್ರವಾಗಿ 5 ವರ್ಷ ಸಂಪೂರ್ಣ ಅವಧಿಯ ಅಧಿಕಾರವನ್ನು ಒಂದು ಸಲ ಕೊಟ್ಟು ನೋಡಿ, ಪಂಚರತ್ನ ಯೋಜನೆಗಳ ಮೂಲಕ ರಾಜ್ಯದ ಚಿತ್ರಣವನ್ನೇ ಬದಲಿಸಿ ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ರಾಜ್ಯದ ಜನತೆಯಲ್ಲಿ  ಮನವಿ ಮಾಡಿದ್ದಾರೆ.
 
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯ ಎರಡನೇ ಹಂತದ ಜಿಕೆಡಬ್ಲುಯು ಮೈದಾನದಲ್ಲಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಸಾರ್ವಜನಿಕ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಪಂಚರತ್ನ ಯೋಜನೆಯಲ್ಲಿ ಖಾಸಗಿ ಶಾಲೆಗಳಿಗೆ ಮಿಗಿಲಾದ ಶಾಲೆಗಳನ್ನು ಆರಂಭಿಸಿ ಉಚಿತ ಶಿಕ್ಷಣ, ಉಚಿತ ಆರೋಗ್ಯ ಚಿಕಿತ್ಸೆ, ಪ್ರತಿಭಾವಂತರ ಮನೆ ಬಾಗಿಲಿಗೆ ಉದ್ಯೋಗ, ಮಹಿಳೆಯರ ಸಬಲೀಕರಣ, ತಲೆಗೊಂದು ಸೂರು, ಸಮಗ್ರ ನೀರಾವರಿಗೆ ಜಲಧಾರೆ ಯೋಜನೆ ತರುವುದು ನಮ್ಮ ಕನಸಾಗಿದೆ ಎಂದು ವಿವರಿಸಿದರು.
 
ಮುಂದಿನ ಚುನಾವಣೆಯಲ್ಲಿ ಜೆಡಿಎಸ್‌ಗೆ ಪೂರ್ಣ ಬಹುಮತ ಬಂದರೆ ಬೆಂಗಳೂರಿನ ಎಲ್ಲ ಕೆರೆಗಳ ಅಭಿವೃದ್ಧಿಯ ಜತೆಗೆ ಕೆರೆಗಳ ಒತ್ತುವರಿ ತೆರವುಗೊಳಿಸಿ ಜಲಮೂಲಗಳನ್ನು ಸಂರಕ್ಷಿಸುವುದಾಗಿ ಹಾಗೂ ನೀರಿನ ವಿಷಯದಲ್ಲಿ ಬೆಂಗಳೂರು ಜನರು ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು.
 
ಜಲ ಮೂಲಗಳನ್ನು ರಕ್ಷಿಸಿ ಅದನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಜಲಧಾರೆ ಕಾರ್ಯಕ್ರಮ ರೂಪಿಸಲಾಗಿದೆ. 
ಕೆರೆಗಳನ್ನು ಉತ್ತಮಪಡಿಸಿ ಅವುಗಳಿಗೆ ನದಿ ನೀರು ತುಂಬಿಸುವ ಕೆಲಸ ಮಾಡಲಾಗುವುದು. ಎಚ್‌.ಡಿ.ದೇವೇಗೌಡರ ಅಧಿಕಾರದಲ್ಲಿ ಇದ್ದಾಗ ರಾಜ್ಯಕ್ಕೆ ಅನೇಕ ನೀರಾವರಿ ಯೋಜನೆ ಕೊಟ್ಟಿದ್ದಾರೆ. ಅದರಲ್ಲೂ ಬೆಂಗಳೂರಿಗೆ ಅನೇಕ ಕಾರ್ಯಕ್ರಮ ಕೊಟ್ಟಿದ್ದಾರೆ. ದೇವೇಗೌಡರು ಮಾಡಿದ ಒಂದು ಆದೇಶದಿಂದ ನಗರಕ್ಕೆ ಕಾವೇರಿ ನದಿಯಿಂದ 9 ಟಿಎಂಸಿ ನೀರು ಸಿಕ್ಕಿದೆ. ಇಂದು ನಗರದ ಜನ ಕಾವೇರಿ ನೀರು ಕುಡಿಯುತ್ತಿದ್ದರೆ, ಅದಕ್ಕೆ ಕಾರಣ ದೇವೇಗೌಡರು ಎಂದು ಹೇಳಿದರು.
 
ನಾನು ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿಗೆ ಅಡಿಗಲ್ಲು ಹಾಕಿ ಮೊದಲ ಹಂತಕ್ಕೆ ಚಾಲನೆ ನೀಡಿದ್ದೆ. ನಗರದ ಐಟಿ ಕ್ರಾಂತಿಗೆ ಮುನ್ನುಡಿ ಬರೆದವರು ದೇವೇಗೌಡರು. ನಗರಕ್ಕೆ ಐಟಿ ಪಾರ್ಕ್ ಬರಲು ಕೂಡ ಅವರೇ ಕಾರಣ. ವರ್ತುಲ ರಸ್ತೆ ಇತ್ಯಾದಿ ಮೂಲಸೌಕರ್ಯವನ್ನು ಕಲ್ಪಿಸಿದವರು ದೇವೇಗೌಡರು. ಇದನ್ನು ಬೆಂಗಳೂರಿನ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments