Select Your Language

Notifications

webdunia
webdunia
webdunia
webdunia

ಧರ್ಮಸ್ಥಳ ಸಾಮೂಹಿಕ ವಿವಾಹ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣನವರ್‌ಗೆ ಬಿಗ್ ಶಾಕ್

Girish Mattannanavar

Sampriya

ಧರ್ಮಸ್ಥಳ , ಮಂಗಳವಾರ, 11 ನವೆಂಬರ್ 2025 (17:01 IST)
Photo Credit X
ಧರ್ಮಸ್ಥಳ ಸಾಮೂಹಿಕ ವಿವಾಹ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಗಿರೀಶ್ ಮಟ್ಟಣ್ಣನವರ್‌ಗೆ ಬಿಗ್ ಶಾಕ್ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹಗಳ ಕುರಿತು ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ದೂರಿನ ಸಂಬಂಧ ಗಿರೀಶ್ ಮಟ್ಟಣ್ಣನವರ್ ವಿರುದ್ಧ 3 ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರಿನ ರಾಜಾಜಿನಗರ ನಿವಾಸಿ ಸಾಮಾಜಿಕ ಕಾರ್ಯಕರ್ತೆ ಕಾವೇರಿ ಕೇದಾರನಾಥ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿದಾರರ ಪರ ಹಿರಿಯ ವಕೀಲ ಎಸ್ ರಾಜಶೇಖರ್ ವಾದಿಸಿದರು.

ಧರ್ಮಸ್ಥಳದಲ್ಲಿ ನಡೆಯುವ ಸಾಮೂಹಿಕ ವಿವಾಹ ಹಾಗೂ ಅಲ್ಲಿ ಮದುವೆಯಾಗುವ ಹೆಣ್ಣು ಮಕ್ಕಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಸಂಬಂಧ ಗಿರೀಶ್ ಮಟ್ಟಣ್ಣನವರ್ ವಿರುದ್ಧ 2025ರ ಆಗಸ್ಟ್ 29ರಂದು ರಾಜ್ಯ ಮಹಿಳಾ ಆಯೋಗಕ್ಕೆ ಕಾವೇರಿ ಕೇದಾರನಾಥ ನೇತೃತ್ವದ ನಿಯೋಗ ದೂರು ಸಲ್ಲಿಸಿತ್ತು. ಅದರಲ್ಲಿ ಸೂಕ್ತ ಕ್ರಮಕ್ಕೆ ಒತ್ತಾಯ ಮಾಡಿತ್ತು. 

ಇದುವರೆಗೆ ಯಾವುದೇ ಕ್ರಮ ಜರಗದ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿದ್ದರು. 

ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ ಅರ್ಜಿದಾರರು ಸಲ್ಲಿಸಿರುವ ದೂರು ಆಧರಿಸಿ ಗಿರೀಶ್ ಮಟ್ಟಣ್ಣನವರ್ ವಿರುದ್ದ ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ನ್ಯಾಯಾಲಯ ಮಹಿಳಾ ಆಯೋಗಕ್ಕೆ ನಿರ್ದೇಶನ ನೀಡಿದೆ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯಾಂಕ್‌ ಖರ್ಗೆಗೆ ಜಗತ್ತಿನಲ್ಲಿ ಯಾರೂ ಬುದ್ಧಿ ಹೇಳೋಕ್ಕೆ ಆಗಲ್ಲ: ಸಿಟಿ ರವಿ ಕೊಟ್ಟ ಕಾರಣ