Webdunia - Bharat's app for daily news and videos

Install App

ಮಹಿಳೆಯರ ವಿರುದ್ಧ ಆಕ್ಷೇಪಾರ್ಯ ಹೇಳಿಕೆ: ಎಚ್‌ಡಿ ಕುಮಾರಸ್ವಾಮಿಗೆ ಹೈಕೋರ್ಟ್‌ನಿಂದ ಬಿಗ್ ರಿಲೀಫ್

Sampriya
ಶುಕ್ರವಾರ, 19 ಏಪ್ರಿಲ್ 2024 (15:38 IST)
ಬೆಂಗಳೂರು: ಕಾಂಗ್ರೆಸ್ ವಿರುದ್ಧ ಟೀಕೆ ಮಾಡುವ ಭರದಲ್ಲಿ ಗ್ಯಾರಂಟಿಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ.

ಈ ಮೂಲಕ ಲೋಕಸಭೆ ಚುನಾವಣೆ ಹತ್ತಿರದಲ್ಲಿರುವ ಎಚ್‌ ಡಿ ಕುಮಾರಸ್ವಾಮಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಮಹಿಳೆಯರ ಘನತೆ ಹಾಗೂ ಚಾರಿತ್ರ್ಯಕ್ಕೆ ಧಕ್ಕೆಯುಂಟುಮಾಡುವಂತಹ ಹೇಳಿಕೆ ನೀಡಿದ ಹಿನ್ನೆಲೆ ಎಚ್‌ಡಿಕೆ ಅವರು 7ದಿನಗಳ ಒಳಗಾಗಿ ಮಹಿಳಾ ಆಯೋಗದ ಮುಂದೆ ಖುದ್ದು ಹಾಜರಾಗಿ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟೀಕರಣ, ವಿವರಣೆ ನೀಡುವಂತೆ ಸೂಚಿಸಿತ್ತು.


ಇದನ್ನು ಪ್ರಶ್ನಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮಹಿಳಾ ಆಯೋಗ ನೀಡಿದ್ದ ನೋಟೀಸ್ ಗೆ ತಡೆಯಾಜ್ಞೆ ನೀಡಿದೆ.

ಅಲ್ಲದೇ ದೂರುಗಳಿಲ್ಲದೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಹಿಳಾ ಆಯೋಗದ ಅಧ್ಯಕ್ಷೆ ಸ್ವತಃ ಸ್ಪಷ್ಟೀಕರಣ ಕೇಳಿ ನೋಟೀಸ್ ನೀಡಿದ್ದು, ಸೆಕ್ಷನ್ 7ರ ವಿರುದ್ಧ ನೋಟೀಸ್ ನೀಡಿದ್ದಾರೆ.

ಕಾರಣ ಕೇಳಿ ಯಾವುದೇ ನೋಟೀಸ್, ಸಮನ್ಸ್ ನೀಡಿಲ್ಲ. ಸ್ಪಷ್ಟೀಕರಣ ನೀಡಿ ಇಲ್ಲವಾದರೆ ಹಾಜರಾಗಿ ಎಂದು ನೋಟೀಸ್ ನೀಡಿದ್ದಾರೆ ಎಂದು ಹೆಚ್.ಡಿ.ಕೆ ಪರ ವಕೀಲರು ವಾದ ಮಂಡಿಸಿದ್ದಾರೆ. ಈ ನಿಟ್ಟಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀಗೆ ಹೈಕೋರ್ಟ್ ನೋಟೀಸ್ ನೀಡಿದೆ ಎಂದು ತಿಳಿದುಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments