Select Your Language

Notifications

webdunia
webdunia
webdunia
webdunia

ಅಧಿಕಾರಿಗಳ ಆತ್ಮಹತ್ಯೆ ಪ್ರಕರಣ ಸರಕಾರಕ್ಕೆ ಕಪ್ಪು ಚುಕ್ಕೆ: ಶ್ರೀನಿವಾಸ್ ಪ್ರಸಾದ್

ಅಧಿಕಾರಿಗಳ ಆತ್ಮಹತ್ಯೆ ಪ್ರಕರಣ ಸರಕಾರಕ್ಕೆ ಕಪ್ಪು ಚುಕ್ಕೆ: ಶ್ರೀನಿವಾಸ್ ಪ್ರಸಾದ್
ಮೈಸೂರು , ಸೋಮವಾರ, 11 ಜುಲೈ 2016 (18:56 IST)
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗುವವರೆಗೂ ಅಧಿವೇಶನದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಅಸಮಾಧಾನ ಹೊರಹಾಕಿದ್ದಾರೆ.
 
ರಾಜ್ಯ ಸಚಿವ ಸಂಪುಟ ಪುನರ್‌ರಚನೆ ಸಮಯದಲ್ಲಿ ಯಾವುದೇ ಮಾಹಿತಿ ನೀಡದೆ ಸಚಿವ ಸ್ಥಾನದಿಂದ ತೆಗೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರಮ ಖಂಡಿಸಿ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಶ್ರೀನಿವಾಸ್ ಪ್ರಸಾದ್ ಬೆಂಬಲಿಗರು, ಇಂದು ಅವರ ಮನೆಯಲ್ಲಿ ಮುಂದಿನ ನಿರ್ಧಾರದ ಕುರಿತು ಚರ್ಚಿಸಲು ಸೇರಿದ ಸಂದರ್ಭದಲ್ಲಿ ಮಾತಾಡಿದರು.
 
ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ಆತ್ಮಹತ್ಯೆ ಪ್ರಕರಣ ಸರಕಾರಕ್ಕೆ ಕಪ್ಪು ಚುಕ್ಕೆಯಾಗಿದ್ದು, ಪಕ್ಷ ಹಾಗೂ ಸರಕಾರದ ಮೇಲೆ ಪರಿಣಾಮ ಬೀರುತ್ತದೆ. ಮುಂದಿನ ರಾಜಕೀಯ ನಡೆಯ ಬಗ್ಗೆ ಬೆಂಬಲಿಗರೊಂದಿಗೆ ಚರ್ಚೆ ನಡೆಸಿ ತಿರ್ಮಾನ ಕೈಗೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.
 
ಕೂಡ್ಲಿಗಿ ಡಿವೈಎಸ್‌ಪಿ ಅನುಪಮಾ ಶೆಣೈ ರಾಜೀನಾಮೆ ಪ್ರಕರಣ, ಚಿಕ್ಕಮಗಳೂರು ಡಿವೈಎಸ್‌ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣ ಮತ್ತು ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಗಳು ರಾಜ್ಯ ಸರಕಾರದ ಮೇಲೆ ಪರಿಣಾಮ ಬಿರಲಿದೆ ಎಂದು ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಎಂ.ಕೆ.ಗಣಪತಿಯದ್ದು ಆತ್ಮಹತ್ಯೆಯಲ್ಲ, ಕೊಲೆ: ಮಾಚಯ್ಯ